ಜೈಪುರ: ಅಭ್ಯರ್ಥಿಯೊಬ್ಬರು ಮತದಾನದ ವೇಳೆ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್ ಡಿಎಂ)ನ ಕಪಾಳಕ್ಕೆ ಥಳಿಸಿದ ಘಟನೆ ರಾಜಸ್ಥಾನದ ಉಪ ಚುನಾವಣೆ ಮತದಾನದ ವೇಳೆ ನಡೆದಿದೆ.
ಪಕ್ಷೇತರ ಅಭ್ಯರ್ಥಿ ನರೇಶ್ ಮೀನಾ ಹಲ್ಲೆ ನಡೆಸಿದ ಪಕ್ಷೇತರ ಅಭ್ಯರ್ಥಿಯಾಗಿದ್ದಾರೆ. ಘಟನೆಯ ಬೆನ್ನಲ್ಲೇ ನರೇಶ್ ಮೀನಾರನ್ನು ಪೊಲೀಸರು ಬಂಧಿಸಿದ್ದಾರೆ.
ಡಿಯೋಲಿ-ಉನಿಯಾರಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ನರೇಶ್ ಮೀನಾ, ಚುನಾವಣಾ ನಿಯಮಗಳನ್ನು ಮೇಲ್ವಿಚಾರಣೆ ಮಾಡಲು ಕರ್ತವ್ಯದಲ್ಲಿದ್ದ ಎಸ್ ಡಿಎಂ ಅಮಿತ್ ಚೌಧರಿ ಮೇಲೆ ಹಲ್ಲೆ ನಡೆಸಿದ್ದರು.
ಚುನಾವಣಾಧಿಕಾರಿಯು ಮೂವರನ್ನು ಬಳಿಸಿಕೊಂಡು ಮತ ಹಾಕುತ್ತಿದ್ದರು. ಹೀಗಾಗಿ ಅವರಿಗೆ ಕಪಾಳ ಮೋಕ್ಷ ಮಾಡಿರುವುದಾಗಿ ಮೀನಾ ಆರೋಪಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q