ಚಿಕ್ಕಬಳ್ಳಾಪುರ: ಕಲ್ಲು ಕೂಚ ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿಯಾಗಿ ಕಂಬಗಳಡಿ ಸಿಲುಕಿಕೊಂಡು ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ-ಗೌರಿಬಿದನೂರು ಮಾರ್ಗದ ಕಣಿವೆ ಬಳಿ ನಡೆದಿದೆ. ಇಬ್ಬರ ಸ್ಥಿತಿ ಗಂಭೀರವಾಗಿದೆ.
ಕೋಲಾರದ ಮಾಲೂರಿನ ಚಿಕ್ಕತಿರುಪತಿಯಿಂದ ಮಂಚೇನಹಳ್ಳಿಗೆ ಬರುತ್ತಿದ್ದ ಕ್ಯಾಂಟರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕ್ಯಾಂಟರ್ ನ ಹಿಂಬದಿಯಲ್ಲಿ ಸಾಗಿಸಲಾಗುತ್ತಿದ್ದ ಕಲ್ಲಿನ ಕಂಬಗಳ ಮೇಲೆ ಕುಳಿತಿದ್ದ ಕೂಲಿ ಕಾರ್ಮಿಕರು, ಈ ಕಲ್ಲುಗಳಡಿ ಸಿಲುಕಿಕೊಂಡು ದಾರುಣವಾಗಿ ಸಾವಿಗೀಡಾದರು.
108 ಸಿಬ್ಬಂದಿ ಮುಷ್ಕರದ ಹಿನ್ನೆಲೆಯಲ್ಲಿ ಕರೆ ಕಳುಹಿಸಿದರೂ ಆಂಬ್ಯುಲೆನ್ಸ್ ಸಮಯಕ್ಕೆ ಸರಿಯಾಗಿ ಬರಲಿಲ್ಲ. ಆಂಬ್ಯುಲೆನ್ಸ್ ಬಂದಿದ್ದರೆ ಜೀವಗಳನ್ನು ಉಳಿಸಬಹುದಾಗಿತ್ತು ಎಂದು ಸ್ಥಳೀಯರು ಹೇಳಿದ್ದಾರೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


