ತುಮಕೂರು: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮುಖ್ಯ ಶಿಕ್ಷಕರು ಸ್ಥಳದಲ್ಲೇ ಮೃತಪಟ್ಟು ಇನ್ನಿಬ್ಬರು ಶಿಕ್ಷಕರಿಗೆ ತೀವ್ರ ಗಾಯಗಳಾಗಿರುವ ಘಟನೆ ಪಟ್ಟಣದ ಪಾವಗಡ ತಾಲೂಕಿನ ತುಮಕೂರು ರಸ್ತೆಯ ಕಣಿವೆನಹಳ್ಳಿ ಗೇಟ್ ಬಳಿ ಭಾನುವಾರ ಬೆಳಗ್ಗೆ ನಡೆದಿದೆ.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ (ಪ್ರೌಢಶಾಲಾ ವಿಭಾಗ) ಉಪ ಪ್ರಾಂಶುಪಾಲರಾದ ಓ ಧನಂಜಯ್ಯ(58) ಮತ್ತು ಗೌಡೇಟಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಶ್ರೀ ಕೃಷ್ಣ(49) ಮೃತರಾಗಿದ್ದಾರೆ.
ತುಮಕೂರಿನಲ್ಲಿ ಶಿಕ್ಷಕರೊಬ್ಬರ ಮಗಳ ಆರತಕ್ಷತೆ ಮುಗಿಸಿ, ಮರಳಿ ಪಾವಗಡಕ್ಕೆ ಬರುವಂತಹ ಸಮಯದಲ್ಲಿ, ಪಾವಗಡ ತುಮಕೂರು ಮಾರ್ಗದ ಕಣಿವೆನಹಳ್ಳಿ ಗೇಟ್ ಬಳಿ ಇರುವ ನಯಾರ ಪೆಟ್ರೋಲ್ ಬಂಕ್ ಸಮೀಪದಲ್ಲಿ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿಯಾಗಿದೆ.
ಡಿಕ್ಕಿಯಾದ ರಭಸಕ್ಕೆ ಶ್ರೀ ಕೃಷ್ಣ ಮತ್ತು ಓ.ಧನಂಜಯ್ಯ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮತ್ತಿಬ್ಬರು ಶಿಕ್ಷಕರಗಳಾದ ಆರ್ ಎಂ ನರಸಿಂಹ ಮತ್ತು ವೆಂಕಟಾಚಲಪತಿ ಅವರಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಲಾಗಿದೆ.
ಓ ಧನಂಜಯ್ಯರವರು ತಾಲ್ಲೂಕಿನ ಕೆಂಚಮ್ಮನ ಗ್ರಾಮದವರಾಗಿದ್ದು, ಶಿಕ್ಷಕರಾಗಿ ಮುಖ್ಯೋಪಾಧ್ಯಾಯರಾಗಿ ಉಪ ಪ್ರಾಂಶುಪಾಲರಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296