ಚಿತ್ರದುರ್ಗ: ಕಾರಿನ ಟೈರ್ ಸ್ಫೋಟಗೊಂಡು ಕಾರು ಪಲ್ಟಿಯಾದ ಘಟನೆ ಚಿತ್ರದುರ್ಗ ತಾಲೂಕಿನ ಕಾತ್ರಾಳ್ ಕೆರೆ ಬಳಿ ನಡೆದಿದ್ದು, ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಮುತ್ತುಸ್ವಾಮಿ(69) ಹಾಗೂ ಪಾಂಡುರಂಗ(32) ಮೃತ ದುರ್ದೈವಿಗಳಾಗಿದ್ದಾರೆ.
ಮತ್ತೋರ್ವನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇವರು ದಾವಣಗೆರೆಯಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಈ ಕುರಿತು ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.


