ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ 2.30 ಲಕ್ಷ ಸಾವಿರ ಕೋಟಿ ಹಣ ಬರ ಪರಿಹಾರಕ್ಕೆ ನೀಡಿದೆ. ಆದರೂ ಕಾಂಗ್ರೆಸ್ ಹಣ ನೀಡಿಲ್ಲವೆಂದು ವ್ಯವಸ್ಥಿತವಾಗಿ ಸುಳ್ಳು ಹೇಳುವ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಕೇಂದ್ರ ಸರ್ಕಾರ 2.30 ಲಕ್ಷ ಸಾವಿರ ಕೋಟಿ ಹಣ ಬಿಡುಗಡೆ ಮಾಡಿದೆ. ರಾಜ್ಯಕ್ಕೆ ಹಣಕಾಸು ಆಯೋಗ ಯಾವುದೇ ಶಿಫಾರಸು ಮಾಡಿಲ್ಲ. ಸಿಎಂ ಸಿದ್ದರಾಮಯ್ಯ ಅವರ ಆರೋಪಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಉತ್ತರ ನೀಡಿದ್ದಾರೆ. ಬರ ನಿರ್ವಹಣೆಯಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿ ತೀವ್ರ ಬರಗಾಲ ಆವರಿಸಿದ್ದು, ಬರ ಪರಿಹಾರಕ್ಕಾಗಿ ಮನವಿ ಸಲ್ಲಿಸಿ 5 ತಿಂಗಳ ಕಳೆದರೂ ಕೇಂದ್ರ ಇನ್ನೂ ಬಿಡುಗಡೆ ಮಾಡಿಲ್ಲ. ಬರ ಪರಿಹಾರ ಸುಪ್ರೀಂ ಕೋರ್ಟ್ನಲ್ಲಿ ಆರ್ಟಿಕಲ್ 32ರ ಅಡಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರಿಟ್ ಅರ್ಜಿ ಸಲ್ಲಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ಇತ್ತೀಚಿಗೆ ಹೇಳಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296