nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026

    ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು

    August 9, 2026

    ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ

    August 9, 2026
    Facebook Twitter Instagram
    ಟ್ರೆಂಡಿಂಗ್
    • ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
    • ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು
    • ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ
    • KPSC ಅಕ್ರಮ ಹಾಗೂ ಬಿಡದಿ ಟೌನ್‌ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
    • ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
    • 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
    • ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ:  ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ
    • ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗ್ಯಾರಂಟಿ ಹೆಸರಿನಲ್ಲಿ ಜನರಿಂದ ಸುಲಿಗೆ ಮಾಡುತ್ತಿರುವ ಕಾಂಗ್ರೆಸ್ ಸರಕಾರ: ಗೋವಿಂದ ಕಾರಜೋಳ
    ರಾಜ್ಯ ಸುದ್ದಿ August 2, 2023

    ಗ್ಯಾರಂಟಿ ಹೆಸರಿನಲ್ಲಿ ಜನರಿಂದ ಸುಲಿಗೆ ಮಾಡುತ್ತಿರುವ ಕಾಂಗ್ರೆಸ್ ಸರಕಾರ: ಗೋವಿಂದ ಕಾರಜೋಳ

    By adminAugust 2, 2023No Comments2 Mins Read
    govindha karajola

    ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು 5 ಗ್ಯಾರಂಟಿಗಳ ಹೆಸರಿನಲ್ಲಿ 75 ಸಾವಿರ ಕೋಟಿಯನ್ನು ಜನರಿಂದ ಸುಲಿಗೆ ಮಾಡುತ್ತಿದೆ ಎಂದು ರಾಜ್ಯದ ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಆರೋಪಿಸಿದರು.

    ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, 50 ಸಾವಿರ ಕೋಟಿ ಖರ್ಚು ಮಾಡುವುದಾಗಿ ಅವರೇ ಹೇಳಿದ್ದಾರೆ. ಈಗಾಗಲೇ ಜುಲೈ ಮುಗಿದಿದೆ. 50 ಸಾವಿರ ಕೋಟಿ ಕೊಡಲು ಹೋಗಿ ಜನರಿಗೆ 75 ಸಾವಿರ ಕೋಟಿ ಟೋಪಿ ಹಾಕುವ ಕೆಲಸವನ್ನು ಮಾಡುತ್ತಿದೆ. ಇದು ಖಂಡನೀಯ. ಇಂಥ ಮೋಸದಾಟ ಒಪ್ಪಲಸಾಧ್ಯ ಎಂದು ತಿಳಿಸಿದರು.

    ನಿನ್ನೆ ಸಮಾಜ ಕಲ್ಯಾಣ ಇಲಾಖೆಯ ವಿಶೇóಷ ಅನುದಾನ ಸಂಬಂಧಿತ ಸಭೆ ಮಾಡಿ, ಎಸ್.ಸಿ.ಎಸ್.ಪಿ.-ಟಿ.ಎಸ್.ಪಿ.ಯ 11 ಸಾವಿರ ಕೋಟಿ ರೂಪಾಯಿ ಹಣವನ್ನು ಬೇರೆ ಉದ್ದೇಶಕ್ಕೆ ಬಳಸಲು ಒಪ್ಪಿಗೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲೇ ಈ ಸಭೆ ಮಾಡಿದ್ದಾರೆ. ಸಂವಿಧಾನದ ಆಶಯ ಏನು? ಈ ದೇಶದಲ್ಲಿರುವ ದೀನದಲಿತರು, ಬಡವರು, ಶಿಕ್ಷಣ ವಂಚಿತರು, ಉದ್ಯೋಗದಲ್ಲಿ ಅವಕಾಶ ವಂಚಿತರು, ಕಡು ಬಡವರನ್ನು ಮೇಲೆತ್ತುವ ಕಾರ್ಯಕ್ರಮಗಳನ್ನು ಮಾಡಬೇಕು. ಮುಖ್ಯವಾಗಿ ಶಿಕ್ಷಣಕ್ಕೆ ಆದ್ಯತೆ ಕೊಡಬೇಕು. ಉದ್ಯೋಗ ನೀಡಿಕೆ, ಮೂಲಭೂತ ಸೌಕರ್ಯಕ್ಕೆ ಆದ್ಯತೆ ನೀಡಬೇಕು. ಆರೋಗ್ಯಕ್ಕೆ ಅನುದಾನ ಕೊಡಬೇಕೆಂಬುದೇ ಸಂವಿಧಾನದ ಆಶಯ. ನಮ್ಮ ಸರಕಾರ ಇದ್ದಾಗ ಹಿಂದೆಯೂ ಕೂಡ ಗಂಗಾ ಕಲ್ಯಾಣ ಯೋಜನೆ, ಭೂಮಿ ಖರೀದಿ, ಮನೆಗಳ ನಿರ್ಮಾಣ, ಹಾಸ್ಟೆಲ್‍ಗಳು, ವಸತಿಶಾಲೆ ನಿರ್ಮಿಸಲು ಅನುದಾನ ನೀಡಿದ್ದೇವೆ. ಈ ಸರಕಾರ ಹಾಸ್ಟೆಲ್ ನಿರ್ಮಾಣ, ವಸತಿ ಶಾಲೆ ನಿರ್ಮಾಣಕ್ಕೆ ಒಂದೇ ಒಂದು ರೂಪಾಯಿ ಇಟ್ಟಿಲ್ಲ ಎಂದು ಟೀಕಿಸಿದರು.

    ಎಸ್‍ ಸಿ, ಎಸ್‍ ಟಿ ಜನಾಂಗಕ್ಕೆ ಜನಸಂಖ್ಯೆಗೆ ಅನುಗುಣವಾಗಿ ಶೇ 24 ಅನುದಾನ ಕೊಡುವ ಶ್ರೇಷ್ಠ ಕೆಲಸ ಮಾಡಿದ್ದಾಗಿ ಸಿದ್ದರಾಮಯ್ಯನವರು ಎದೆ ಬಡಿದುಕೊಳ್ಳುತ್ತಿದ್ದರು. ಅವರು ಮಾಡಿದ್ದಾದರೂ ಏನು ಎಂದು ಕೇಳಿದರು. 156 ವಸತಿ ಶಾಲೆಯ ಕಟ್ಟಡದ ಕಾಮಗಾರಿ ಕಳೆದ 3 ತಿಂಗಳಿನಿಂದ ನಿಲ್ಲಿಸಿದ್ದಾರೆ. 75 ಹಾಸ್ಟೆಲ್ಗಳ ನಿರ್ಮಾಣ ಕಾರ್ಯ ಸ್ಥಗಿತವಾಗಿದೆ. 108 ವಸತಿ ಶಾಲೆಗಳಿಗೆ ಪ್ರತಿ ಶಾಲೆಗೆ 10 ಎಕರೆಯಷ್ಟು ಭೂಮಿಯನ್ನು ನಾವು ನೀಡಿದ್ದೆವು. ಅವುಗಳಿಗೆ ಹಣ ಮಂಜೂರು ಮಾಡಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

    ಸಚಿವ ಮಹದೇವಪ್ಪನವರು ಸುಮ್ಮನೆ ರಾಜಕೀಯಕ್ಕೆ ಬಂದವರಲ್ಲ. ಅವರಿಗೆ ದಲಿತ ಸಂಘರ್ಷ ಸಮಿತಿ ಹೋರಾಟದ ಹಿನ್ನೆಲೆ ಇದೆ. ಅವರು ಯಾವುದೇ ಕಾರಣಕ್ಕೂ ಅನುದಾನ ಹೊಂದಾಣಿಕೆಯನ್ನು ಒಪ್ಪಬಾರದು ಎಂದು ಆಗ್ರಹಿಸಿದರು. ಒಲ್ಲದ, ಭಾರವಾದ ಮನಸ್ಸಿನಿಂದ ಇದನ್ನು ಒಪ್ಪಿಕೊಂಡಿದ್ದಾಗಿ ಮಹದೇವಪ್ಪನವರು ಹೇಳಿದ್ದನ್ನು ಕೆಲವು ಪತ್ರಿಕೆಯವರು ಪ್ರಕಟಿಸಿದ್ದಾರೆ. ಮಹದೇವಪ್ಪನವರು ಡಾ. ಬಿ.ಆರ್.ಅಂಬೇಡ್ಕರ್ ಅವರು ನೀಡಿದ ಶಕ್ತಿಯಿಂದ ಇದಕ್ಕೆ ತಡೆ ಒಡ್ಡಬೇಕು ಎಂದು ಅವರು ಒತ್ತಾಯಿಸಿದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026

    ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು

    August 9, 2026

    ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ

    August 9, 2026

    Comments are closed.

    Our Picks

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026

    ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಭ್ರಷ್ಟಾಚಾರ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ರಾಜಕೀಯದಲ್ಲಿ ಮತ್ತೆ ಆರೋಪ-ಪ್ರತ್ಯಾರೋಪಗಳು…

    ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು

    August 9, 2026

    ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ

    August 9, 2026

    KPSC ಅಕ್ರಮ ಹಾಗೂ ಬಿಡದಿ ಟೌನ್‌ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು

    August 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.