ಮೋದಿಗೆ ಕಾಂಗ್ರೆಸ್ ನಲ್ಲಿ ಸರಿಸಮಾನವಾದ ವ್ಯಕ್ತಿ ಇಲ್ಲವೇ ಇಲ್ಲ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಈ ಸಂಬಂಧ ಗದಗದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಆ ಪಕ್ಷಕ್ಕೆ ಯಾರೂ ನಾಯಕರಿಲ್ಲ. ಮುಂದಿನ ಪ್ರಧಾನಿ ಅಭ್ಯರ್ಥಿ ಯಾರು ಅಂತ ಅವರ ಕಣ್ಣಮುಂದೆ ಇಲ್ಲ. ಮೋದಿಗೆ ಸರಿಸಮಾನ ವ್ಯಕ್ತಿ ಕಾಂಗ್ರೆಸ್ ನಲ್ಲಿ ಯಾರೂ ಇಲ್ಲ’ ಎಂದು ಹೇಳಿದರು.
ರಾಜ್ಯದ 28 ಕ್ಷೇತ್ರಗಳಲ್ಲಿ ಈಗಾಗಲೇ ಪ್ರವಾಸ ಮಾಡಿದ್ದೇನೆ. ರಾಜ್ಯದಲ್ಲಿನ 28 ಕ್ಷೇತ್ರಗಳನ್ನೂ ಗೆಲ್ಲುವ ವಿಶ್ವಾಸ ಇದೆ. ಮೋದಿ ಹೆಸರಿನಲ್ಲಿ ನಾವು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಜನರು ಬಿಜೆಪಿಗೆ ಬೆಂಬಲಿಸುತ್ತಾರೆ. ಹಾವೇರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಎರಡು ಲಕ್ಷಕ್ಕೂ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುತ್ತಾರೆ’ಎಂದರು.
ಬಿಜೆಪಿಗೆ ಮತ ಹಾಕಿದರೆ ಗ್ಯಾರಂಟಿಗಳನ್ನು ರದ್ದು ಮಾಡುತ್ತಾರೆ ಎಂಬ ಶಾಸಕ ರಾಜು ಕಾಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ನಾವು ಅಭಿವೃದ್ಧಿ ಕಡೆಗೆ ವಿಶೇಷ ಗಮನ ನೀಡುತ್ತೇವೆ. ಆದರೆ, ಕಾಂಗ್ರೆಸ್‌ನವರು ಅಧಿಕಾರಕ್ಕೆ ಬಂದ ಮೇಲೆ ವಿದ್ಯುತ್ ದರ ಜಾಸ್ತಿ ಮಾಡಿದರು. ಕೇಂದ್ರದ ಕಿಸಾನ್ ಸಮ್ಮಾನ್ ಯೋಜನೆ ನಿಲ್ಲಿಸಿದ್ದಾರೆ. ಅಧಿಕಾರಕ್ಕೆ ಬಂದಾಗಿನಿಂದಲೂ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಕೊಟ್ಟಿಲ್ಲ. ಸರ್ಕಾರ ದಿವಾಳಿ ಆಗಿದೆ’ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA