ಕ್ರೆಡಿಟ್ ಕಾರ್ಡ್ ಸಂಪೂರ್ಣ ಮೊತ್ತವನ್ನು ಪಾವತಿಸಿದ ಬಳಿಕವೂ 6 ಸಾವಿರ ರೂ. ಪಾವತಿ ಮಾಡುವಂತೆ ಗ್ರಾಹಕರೊಬ್ಬರಿಗೆ ಸೂಚನೆ ನೀಡಿದ್ದ ಖಾಸಗಿ ಬ್ಯಾಂಕ್ ಗೆ ಗ್ರಾಹಕರ ನ್ಯಾಯಾಲಯವು 5 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ.
ಅಲ್ಲದೇ, ನೋ ಡ್ಯೂ ಸರ್ಟಿಫಿಕೇಟ್ ನೀಡುವಂತೆ ಸೂಚನೆ ನೀಡಿದ್ದಲ್ಲದೇ, ದಂಡದ ಮೊತ್ತವನ್ನು ಆದೇಶ ಪ್ರತಿ ಲಭ್ಯವಾದ 45 ದಿನಗಳಲ್ಲಿ ಪಾವತಿಸಬೇಕು. ಇಲ್ಲವಾದಲ್ಲಿ ಮಾಸಿಕ ಶೇಕಡಾ 9ರಷ್ಟು ಬಡ್ಡಿಯೊಂದಿಗೆ ಪಾವತಿ ಮಾಡಬೇಕು ಎಂದು ನಿರ್ದೇಶನ ನೀಡಿದೆ.


