nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಸ್‌ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ

    July 24, 2026

    ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್

    July 24, 2026

    ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ

    July 24, 2026
    Facebook Twitter Instagram
    ಟ್ರೆಂಡಿಂಗ್
    • ಎಸ್‌ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ
    • ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್
    • ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ
    • ಕುಡಿಯುವ ನೀರಿನ ಪೂರೈಕೆಗಾಗಿ ತಾಲೂಕಿಗೆ 1 ಕೋಟಿ, ಜಿಲ್ಲೆಗೆ 5 ಕೋಟಿ | ರೈತರಿಗೆ ಸಮಸ್ಯೆಯಾಗದಂತೆ ಕ್ರಮ: ಡಿಸಿಎಂ ಡಾ.ಜಿ.ಪರಮೇಶ್ವರ್
    • ಹುಟ್ಟುಹಬ್ಬದಂದು ಹಮ್ಮಿಕೊಂಡ ಸಾಮಾಜಿಕ ಕಾರ್ಯಗಳಿಗೆ ತಡೆ: ತಿಪಟೂರು ತಾಲೂಕು ಆಡಳಿತ ವಿರುದ್ಧ ಅಶ್ವಥ್ ನಾರಾಯಣ್ ಆಕ್ರೋಶ
    • ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ: ‘ದೇಶದ್ರೋಹಿ’ಗಳ ಜೊತೆ ಸೇರಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಯತ್ನ: ಬಿಜೆಪಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ಆರೋಪ
    • ನೀಟ್ ಹಗರಣ: ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ವಕೀಲರ ಘಟಕದಿಂದ ಪ್ರತಿಭಟನೆ
    • ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಮ್ಮನ ಕೊಳೆತ ಮೃತದೇಹದ ಜೊತೆಯೇ ಮೂರು ದಿನ ಕಳೆದ ಪುತ್ರಿ
    ರಾಜ್ಯ ಸುದ್ದಿ May 20, 2024

    ಅಮ್ಮನ ಕೊಳೆತ ಮೃತದೇಹದ ಜೊತೆಯೇ ಮೂರು ದಿನ ಕಳೆದ ಪುತ್ರಿ

    By adminMay 20, 2024No Comments2 Mins Read
    kundhapura

    ಜೀವನದಲ್ಲಿ ನಾವು ಎಷ್ಟೋ ಕಷ್ಟಗಳನ್ನು ಅನುಭವಿಸುತ್ತೇವೆ. ಆದರೆ ಇಲ್ಲೊಂದು ಕಡೆ ತಾಯಿ-ಮಗಳು ಅನುಭವಿಸಿದ ಕಷ್ಟದ ಎದುರು ನಮ್ಮ ಕಷ್ಟ ಏನಿಲ್ಲ ಅನ್ನಿಸಿಬಿಡುತ್ತೆ.

    ಹೌದು, ಮಗಳು ವಿಶೇಷ ಚೇತನ ಯುವತಿ, ಆಕೆ ಹೆಸರು ಪ್ರಗತಿ(32 ವರ್ಷ). ತಾಯಿಯ ಹೆಸರು ಜಯಂತಿ ಶೆಟ್ಟಿ(61 ವರ್ಷ). ಇವರು ಕುಂದಾಪುರದ ಗೋಪಾಡಿ ಗ್ರಾಮದ ಮೂಡು ಗೋಪಾಡಿಯ ದಾಸನಹಾಡಿಯ ನಿವಾಸಿ. ವಿಶೇಷ ಚೇತನ ಹುಡುಗಿಗೆ ತಾಯಿ ಆಸರೆಯಾಗಿದ್ದರು. ಇವರಿಬ್ಬರೇ ಮನೆಯಲ್ಲಿ ವಾಸವಾಗಿದ್ದರು.

    ಆದರೆ ಅದೇನಾಯ್ತೋ ಗೊತ್ತಿಲ್ಲ. ತಾಯಿ ಸಾವನ್ನಪ್ಪಿದ್ದಾರೆ. ಮೂರು ದಿನಗಳ ತನಕ ಈ ವಿಚಾರ ಯಾರಿಗೂ ಗೊತ್ತಾಗಲಿಲ್ಲ. ಕೊಳೆತ ವಾಸನೆ ಹೊಡೆಯುತ್ತಿದ್ದದರಿಂದ ಸ್ಥಳೀಯರು ಬಂದು ಪರಿಶೀಲನೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ. ತಕ್ಷಣ ಸ್ಥಳೀಯರೆಲ್ಲರು ಸೇರಿ ವಿಶೇಷ ಚೇತನ ಯುವತಿಯನ್ನು ರಕ್ಷಣೆ ಮಾಡ್ತಾರೆ. ಆದರೆ ದುರಾದೃಷ್ಟವಶಾತ್ ಪ್ರಗತಿ ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ.

    ಬ್ಯಾಂಕ್ ಉದ್ಯೋಗಿಯಾಗಿದ್ದ ಪತಿಯ ಸಾವಿನ ಬಳಿಕ ದಾಸನಹಾಡಿಯ ಮನೆಯಲ್ಲಿ ಜಯಂತಿ ಅವರು ವಿಶೇಷ ಚೇತನ ಪುತ್ರಿ ಪ್ರಗತಿಯೊಂದಿಗೆ ನೆಲೆಸಿದ್ದರು. ಈಕೆ ಸಣ್ಣ ವಯಸ್ಸಿಗೆ ಬುದ್ಧಿಮಾಂದ್ಯಳಾಗಿದ್ದಳು. ಇತ್ತೀಚೆಗೆ ಆಕೆಗೆ ಮಧುಮೇಹ ಹೆಚ್ಚಾಗಿದ್ದರಿಂದ ಒಂದು ಕಾಲನ್ನೇ ಕತ್ತರಿಸಲಾಗಿದೆ. ಇಷ್ಟೆಲ್ಲ ನೋವಿನ ನಡುವೆ ತಾಯಿ ಜಯಂತಿ ಶೆಟ್ಟಿ ಮಗಳನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದರು.

    ಮೇ12ರಂದು ಮಗಳ ಆರೋಗ್ಯದಲ್ಲಿ ಚೇತರಿಕೆಯಾಗಬೇಕು ಅನ್ನುವ ಸದುದ್ದೇಶದಿಂದ ತಾಯಿ ಜಯಂತಿ ಆನೆಗುಡ್ಡೆ ದೇಗುಲದಲ್ಲಿ ಪೂಜೆ ಸಲ್ಲಿಸಿದ್ದರು. ಮೇ 13ರಂದು ಕೋಟೇಶ್ವರ ದೇವ ಸ್ಥಾನಕ್ಕೆ ಪೂಜೆ ಸಲ್ಲಿಸಲು ಹೋಗುವುದಿದೆ ಎಂದು ಸ್ಥಳೀಯ ಆಟೋ ಚಾಲಕರೊಬ್ಬರಿಗೆ ತಿಳಿಸಿದ್ದರು. ಆಟೋ ಚಾಲಕ ಬೆಳಗ್ಗೆ ಫೋನ್ ಮಾಡಿದರೆ ಜಯಂತಿ ಫೋನ್ ಅನ್ನು ರಿಸೀವ್ ಮಾಡಿರಲಿಲ್ಲ. ಹೀಗಾಗಿ ಈ ಸಮಯದಲ್ಲಿ ಮಹಿಳೆ ಬಿದ್ದು ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಗೋಡೆಯಲ್ಲಿ ರಕ್ತದ ಕಲೆ ಇರುವುದರಿಂದ ಈಕೆ ಜಾರಿ ಬಿದ್ದು ಸಾವನ್ನಪ್ಪಿರಬಹುದು ಎಂದು ಅಂದಾಜಿಸಲಾಗಿದೆ. ಇದಾದ ಬಳಿಕ ಮಗಳು ಪ್ರಗತಿ ಮೂರು ದಿನಗಳ ಕಾಲ ಅನ್ನ, ನೀರಿಲ್ಲದೆ ಮೂರು ದಿನಗಳ ಕಾಲ ಒಬ್ಬಳೇ ಕಳೆದಿರುವುದು ಎಲ್ಲರಿಗೂ ಆಘಾತವನ್ನುಂಟು ಮಾಡಿದೆ.

    ಜಯಂತಿ ಬಿದ್ದು ಗಾಯಗೊಂಡಿದ್ದರು. ಅವರಿಗೆ ಮಧುಮೇಹ, ಅಧಿಕ ರಕ್ತ ದೊತ್ತಡವೂ ಇದ್ದುದರಿಂದ ಗಂಭೀರಗೊಂಡು ಸಾವನ್ನಪ್ಪಿರಬಹುದು ಎಂದು ಸಂಶಯಿಸಲಾಗಿದೆ. ಗೋಡೆ, ನೆಲದ ಮೇಲೆ ರಕ್ತದ ಕಲೆ ಪತ್ತೆಯಾಗಿದೆ. ಮಣಿಪಾಲದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ವರದಿ ಬಂದ ಬಳಿಕವಷ್ಟೇ ಸಾವಿಗೆ ಏನು ಕಾರಣ ಅನ್ನುವುದು ತಿಳಿದು ಬರಲಿದೆ. ಪ್ರಗತಿಗೆ ಮೇ 14ರಂದು ಆಕೆಗೆ ಕೃತಕ ಕಾಲು ಜೋಡಣೆ ಆಗಬೇಕಿತ್ತು. ಆದರೆ ವಿಧಿಯಾಟ ಬೇರೆಯದ್ದೇ ಆಗಿದ್ದು ವಿಪರ್ಯಾಸ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     


    Provided by
    Provided by
    admin
    • Website

    Related Posts

    ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ

    July 20, 2026

    ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ

    July 19, 2026

    ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು

    July 18, 2026

    Comments are closed.

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಎಸ್‌ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ

    July 24, 2026

    ತುಮಕೂರು: ಎಸ್‌ ಐಆರ್ ಎನ್ಯುಮರೇಷನ್ ಅರ್ಜಿ ವಿತರಣೆಯಲ್ಲಿ ಜು.23ರ ಗುರುವಾರದ ಅಂತ್ಯಕ್ಕೆ ಶೇ.100ರಷ್ಟು ಪ್ರಗತಿಯಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯಾದ ಡಿಸಿ…

    ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್

    July 24, 2026

    ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ

    July 24, 2026

    ಕುಡಿಯುವ ನೀರಿನ ಪೂರೈಕೆಗಾಗಿ ತಾಲೂಕಿಗೆ 1 ಕೋಟಿ, ಜಿಲ್ಲೆಗೆ 5 ಕೋಟಿ | ರೈತರಿಗೆ ಸಮಸ್ಯೆಯಾಗದಂತೆ ಕ್ರಮ: ಡಿಸಿಎಂ ಡಾ.ಜಿ.ಪರಮೇಶ್ವರ್

    July 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.