ಬೆಂಗಳೂರು: ಮನೆಯ ಶೌಚಾಲಯದಲ್ಲಿ ಕತ್ತು ಕೊಯ್ದ ಸ್ಥಿತಿಯಲ್ಲಿ ಯುವತಿ ಸಾವನ್ನಪ್ಪಿರುವ ಘಟನೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಪ್ರಭುಧ್ಯಾ(21) ಸಾವನ್ನಪ್ಪಿರುವ ಯುವತಿಯಾಗಿದ್ದಾಳೆ.
ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಪ್ರಭುಧ್ಯಾ ಮೃತದೇಹ ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಬುಧವಾರ ಸಂಜೆ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಅಸಹಜ ಸಾವು ಅಡಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296