ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ ಆಗಿದೆ. ಸುಮಾರು 35 ವರ್ಷದ ಪುರುಷನ ಮೃತದೇಹ ಇದಾಗಿದೆ.
ಸ್ಥಳಕ್ಕೆ ಮಲೆ ಮಹದೇಶ್ವರ ಬೆಟ್ಟ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಗುರುತು, ಪತ್ತೆಗಾಗಿ ಶವದ ಫೋಟೊವನ್ನು ಜಿಲ್ಲೆಯ ಪೊಲೀಸ್ ಠಾಣೆಗಳಿಗೆ ರವಾನೆ ಮಾಡಿದ್ದಾರೆ. ಹತ್ಯೆ ಮಾಡಲಾಗಿದೆಯಾ ಅಥವಾ ಆತ್ಮಹತ್ಯೆನಾ ಎಂದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹವನ್ನ ಹನೂರು ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.


