ತುಮಕೂರು: ಗ್ರಾಮ ಪಂಚಾಯಿತಿ ಸದಸ್ಯೆ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಮೃತಳನ್ನು ಭಾಗ್ಯ (30) ಎಂದು ಗುರುತಿಸಲಾಗಿದೆ.
ಭಾಗ್ಯ ಹಿರೇಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆಯಾಗಿದ್ದರು. ಶುಕ್ರವಾರ ನೇಣು ಬಿಗಿದ ಸ್ಥಿತಿಯಲ್ಲಿ ಭಾಗ್ಯ ಮೃತದೇಹ ಪತ್ತೆಯಾಗಿದೆ.
ಸಂಬಂಧಿಕದರಿಂದ ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿದ್ದು, ತುಮಕೂರಿನ ಕ್ಯಾತ್ಸಂದ್ರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.


