ತಿಪಟೂರು: ತಾಲ್ಲೂಕಿನ ನೊಣವಿನಕೆರೆ ಹೋಬಳಿ ಹೊನ್ನೆನಹಳ್ಳಿ ಗ್ರಾಮದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ.
ಹೊನ್ನೆನಹಳ್ಳಿ ಗ್ರಾಮದ ವಾಸಿ ಮಹೇಶ್(24) ಮೃತ ದುರ್ದೈವಿ. ತಮ್ಮ ತೋಟದ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು ಸಾವಿಗೆ ಕಾರಣ ತಿಳಿದು ಬಂದಿಲ್ಲ.
ಮೃತ ಮಹೇಶ್ ಪೋಷಕರು ಕೊಲೆ ಶಂಕೆ ವ್ಯಕ್ತಪಡಿಸಿದ್ದು, ನೊಣವಿನಕೆರೆ ಪೊಲೀಸ್ ಠಾಣೆ ಪೋಲೀಸರು ಸ್ಥಳಪರಿಶೀಲನೆ ನಡೆಸಿದ್ದಾರೆ. ಸದ್ಯ, ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.
ವರದಿ: ಆನಂದ್ ತಿಪಟೂರು


