ಡೆಂಗ್ಯೂಗೆ ಮತ್ತೋರ್ವ ಪುಟ್ಟ ಬಾಲಕಿ ಬಲಿಯಾದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದ್ದು, ಈ ಮೂಲಕ ಹಾಸನದಲ್ಲಿ ಡೆಂಗ್ಯೂವಿನಿಂದ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ಮೃತ ಬಾಲಕಿಯನ್ನು ಹೊಳೆನರಸೀಪುರ ತಾಲ್ಲೂಕಿನ, ದೊಡ್ಡಳ್ಳಿ ಗ್ರಾಮದ ಸಮೃದ್ಧಿ (8) ಎಂದು ಗುರುತಿಸಲಾಗಿದೆ. ಬಾಲಕಿ ಗ್ರಾಮದ ರಮೇಶ್–ಅಶ್ವಿನಿ ದಂಪತಿಯ ಪುತ್ರಿಯಾಗಿದ್ದು, ಕಳೆದ 4 ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದಳು. ಮೂರು ದಿನದ ಹಿಂದೆ ಬಾಲಕಿಯನ್ನು ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಬಳಿಕ ಆರೋಗ್ಯದಲ್ಲಿ ಚೇತರಿಕೆ ಕಾಣದ ಹಿನ್ನೆಲೆ ಮೈಸೂರಿನ ಅಪೋಲೊ ಆಸ್ಪತ್ರೆಗೆ ಬಾಲಕಿಯನ್ನು ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಇದೀಗ ಸಾವನ್ನಪ್ಪಿದ್ದಾಳೆ. ಕಳೆದ ಒಂದು ವಾರದಲ್ಲಿ ಹಾಸನ ಜಿಲ್ಲೆಯಲ್ಲಿ ಶಂಕಿತ ಡೆಂಗ್ಯೂಗೆ ನಾಲ್ವರು ಬಾಲಕಿಯರು ಬಲಿಯಾಗಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


