ಬೆಳಗಾವಿ: ಬಿಜೆಪಿ ಬಿಟ್ಟು ಯಾರು ಹೋಗುವುದಿಲ್ಲ. ಪಕ್ಷ ಬಿಟ್ಟು ಹೋಗುತ್ತೇವೆ ಎಂದು ಯಾರೂ ನಿಖರವಾಗಿ ಹೇಳಿಲ್ಲ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಅಭಿವೃದ್ಧಿ ಕೆಲಸ ಆಗುತ್ತಿಲ್ಲ.
ಮೂರು ತಿಂಗಳಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ರಾತ್ರಿ ಕಂಡ ಬಾವಿಗೆ ಹಗಲಿನಲ್ಲಿ ಯಾರೂ ಬೀಳುವುದಿಲ್ಲ. ಈ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ ಎಂದು ಬೆಳಗಾವಿಯಲ್ಲಿ ಮಾಜಿ ಸಚಿವ ಕಾರಜೋಳ ವಾಗ್ದಾಳಿ ಮಾಡಿದರು.


