ಯುವತಿಯನ್ನು ಥಳಿಸಿ ವಿವಸ್ತ್ರಗೊಳಿಸಿ ವಿಕೃತಿ ಮೆರೆದಿರುವ ಘಟನೆ ರಾಜಸ್ಥಾನದ ಪ್ರತಾಪಗಢದಲ್ಲಿ ನಡೆದಿದೆ. ಪತಿಯಿಂದ ದೂರ ಉಳಿದು ಬೇರೊಬ್ಬ ಯುವಕನೊಂದಿಗೆ ವಾಸಿಸಲು ಮಹಿಳೆ ನಿರ್ಧರಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ನಡೆದಾಗ ಮಹಿಳೆಯ ಪತಿ ಸಂಬಂಧಿಕರು ಜೊತೆಗಿದ್ದರು ಎನ್ನಲಾಗಿದೆ.
ಆರೋಪಿಗಳ ಪತ್ತೆಗೆ ಆರು ತಂಡಗಳನ್ನು ರಚಿಸಲಾಗಿದ್ದು, ತನಿಖೆ ತೀವ್ರವಾಗಿ ನಡೆಯುತ್ತಿದೆ ಎಂದು ಪ್ರತಾಪಗಢ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕೂಡ ಹೇಳಿದ್ದಾರೆ. ಇದೇ ವೇಳೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ, ಮಹಿಳೆಯರ ಮೇಲಿನ ಅಪರಾಧಗಳಲ್ಲಿ ರಾಜ್ಯ ಮೊದಲ ಸ್ಥಾನದಲ್ಲಿದೆ ಎಂದು ಟೀಕಿಸಿದರು.


