ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಬಿದ್ದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಶಿಲಾ ತಾಲ್ಲೂಕಿನಲ್ಲಿ ಸಂಭವಿಸಿದೆ.
ಮೃತರನ್ನು ದೊಡ್ಡಣ್ಣ, ಸಣ್ಣಮ್ಮ ಮತ್ತು ಯಮುನಾ ಎಂದು ಗುರುತಿಸಲಾಗಿದೆ.ಶಿರಾ ತಾಲ್ಲೂಕು ವೀರಾಪುರ ಗ್ರಾಮದ ಒಂದೇ ಕುಟುಂಬದ ಸದಸ್ಯರು ವೀರಾಪುರದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಬುಕ್ಕಾಪಟ್ಟದ ರಾಮಲಿಂಗಾಪುರ ಕೆರೆ ಸಮೀಪ ಬರುತ್ತಿದ್ದಂತೆಯೇ ಮಾರುತಿ ಕಾರು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದಿದೆ.
ಕಾರು ಕೆರೆಗೆ ಬಿದ್ದ ನಂತರ ಕಾರಿನಲ್ಲಿದ್ದ ಪ್ರವೀಣ ಎಂಬುವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ರವೀಣ್ ಪತ್ನಿ ಯಮುನಾ, ಮಾವ ದೊಡ್ಡಣ್ಣ ಅತ್ತೆ ಸಣ್ಣಮ್ಮ ಮೃತರಾಗಿದ್ದಾರೆ.
ಮೃತರು ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿಯ ವೀರಾಪುರ ಗ್ರಾಮದವರು. ಇಂದು ಬೆಳಗಿನ ಜಾವ ವೀರಾಪುರದಿಂದ ಧರ್ಮಸ್ಥಳಕ್ಕೆ ಹೊರಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಶಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


