ತುರುವೇಕೆರೆ: ತಾಲೂಕಿಗೆ ಸಮೀಪದಲ್ಲಿರುವ ತಾವರೆಕೆರೆ ತಿರುವಿನಲ್ಲಿ ತಡರಾತ್ರಿ ಒಂದು ಗಂಟೆಯ ಸಮಯದಲ್ಲಿ, ಕೆ.ಬಿ. ಕ್ರಾಸ್ ನಿಂದ ತುರುವೇಕೆರೆಗೆ ಬರುತ್ತಿದ್ದ ಹುಂಡೈ ಐ ಟ್ವೆಂಟಿ KA52 MJ19 22 ನಂಬರಿನ ಕಾರು, ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬಲಭಾಗದಲ್ಲಿರುವ ತಡೆಗೋಡೆಯ ಕಲ್ಲುಗಳನ್ನು ಮುರಿದು, ಗುಂಡಿ ಒಳಗೆ ಬಿದ್ದಿರುವ ಘಟನೆ ನಡೆದಿದೆ.
ಈ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಜೊತೆಯಲ್ಲಿದ್ದ ಮತ್ತೊಬ್ಬನಿಗೆ ಗಂಭೀರ ಸ್ವರೂಪದ ಪೆಟ್ಟಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತ ವ್ಯಕ್ತಿ ತುರುವೇಕೆರೆ ತಾಲೂಕಿನ ದಬ್ಬೆಘಟ್ಟ ಹೋಬಳಿಯ ಲಿಂಗರಾಜು ಬಿನ್ ಗೋವಿಂದಪ್ಪ 40 ವರ್ಷ ಹಾಗೂ ಗಾಯಾಳು ಅದೇ ಗ್ರಾಮದ ಅಕ್ಷಯ್ ಬಿನ್ ಚಂದ್ರಯ್ಯ ಎಂದು ತಿಳಿದು ಬಂದಿದೆ.
ಮೃತ ವ್ಯಕ್ತಿಯ ಮೃತದೇಹವನ್ನು ತುರುವೇಕೆರೆ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ತರಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಮೃತ ವ್ಯಕ್ತಿಗೆ ಹೆಂಡತಿ ತಂದೆ ತಾಯಿ ಮತ್ತು ಓರ್ವ ಸಹೋದರ ಸಹೋದರಿಯರು ಇದ್ದು, ಮೃತ ವ್ಯಕ್ತಿಯ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.
ವರದಿ: ಸುರೇಶ್ ಬಾಬು ಎಂ ತುರುವೇಕೆರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296