ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಬೆಳಗ್ಗೆ 7ರಿಂದ 9.30ರವರೆಗೆ ಶಾಲಾ ವಾಹನಗಳ ತಪಾಸಣೆ ನಡೆಸಿದ್ದು ಬೆಳ್ಳಂಬೆಳಗ್ಗೆ ಮದ್ಯಪಾನ ಮಾಡಿ ಶಾಲಾ ವಾಹನ ಓಡಿಸುತ್ತಿದ್ದ ಚಾಲಕರು ಸಿಕ್ಕಿಬಿದ್ದಿದ್ದಾರೆ.
ಈ ವೇಳೆ ಸುಮಾರು 3,414 ಶಾಲಾ ವಾಹನಗಳನ್ನು ತಪಾಸಣೆ ಮಾಡಿದ್ದು ಈ ಪೈಕಿ 16 ಚಾಲಕರು ಮದ್ಯಸೇವಿಸಿ ಶಾಲಾ ವಾಹನ ಚಾಲನೆ ಮಾಡಿದ್ದು ಬೆಳಕಿಗೆ ಬಂದಿದೆ. 16 ಶಾಲಾ ಚಾಲಕರ ವಿರುದ್ಧ ಸಂಚಾರಿ ಪೊಲೀಸರು ಕೇಸ್ ದಾಖಲಿಸಿದ್ದಾರೆ. ಕುಡಿದು ವಾಹನ ಚಲಾಯಿಸುತ್ತಿದ್ದವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಿದೆ. 16 ಚಾಲಕರ ವಾಹನ ಪರವಾನಗಿ ಪತ್ರ ಆರ್ ಟಿಒ ಕಚೇರಿಗೆ ರವಾನಿಸಲಾಗಿದೆ.


