ಪುತ್ರನಿಗೆ ಹಾವೇರಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನಲೆಯಲ್ಲಿ ಬಂಡಾಯವೆದ್ದು, ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ ಚುನಾವಣಾ ಆಯೋಗ ಚಿಹ್ನೆ ನೀಡಿದೆ.
ಕಬ್ಬಿನ ಜೊತೆ ಇರುವ ರೈತನ ಚಿಹ್ನೆಯನ್ನು ಕೆ.ಎಸ್. ಈಶ್ವರಪ್ಪಗೆ ನೀಡಲಾಗಿದೆ. ಕಳೆದ ವಿಧಾನಸಭಾ ಚುನಾವಣಾ ವೇಳೆಯೇ ಚುನಾವಣಾ ರಾಜಕೀಯಕ್ಕೆ ರಾಜಕೀಯ ಘೋಷಿಸಿದ್ದ ಕೆ.ಎಸ್. ಈಶ್ವರಪ್ಪ ತಮ್ಮ ಪುತ್ರ ಕಾಂತೇಶ್ ಗೆ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ನೀಡುವಂತೆ ಮನವಿ ಮಾಡಿದ್ದರು.
ಆದರೆ ತಮ್ಮ ಪುತ್ರ ಕಾಂತೇಶ್ ಗೆ ಟಿಕೆಟ್ ಸಿಗದ ಹಿನ್ನೆಲೆ ಬಿಜೆಪಿ ವಿರುದ್ದ ಬಂಡಾಯ ಅಭ್ಯರ್ಥಿಯಾಗಿ ಚುನಾವಣಾ ಕಣದಲ್ಲಿ ಉಳಿದುಕೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


