ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ಪರೀಕ್ಷೆಯಲ್ಲಿ ಫೇಲ್ ಆಗಿರುವ ವಿಚಾರ ಪೋಷಕರಿಗೆ ತಿಳಿಯುತ್ತದೆ ಎಂದು ಹೆದರಿದ ಇಂಜಿನಿಯರಿಂಗ್ ವಿದ್ಯಾರ್ಥಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಅಮೃತೇಶ್ ಪಾಂಡೆ (21) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ.
ಅಮೃತೇಶ್ ಪಾಂಡೆ ಮೂಲತಃ ಬಿಹಾರ ಮೂಲದವರಾಗಿದ್ದು, ಆರ್.ವಿ. ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ. ಅಮೃತೇಶ್, ಹಾಸ್ಟೆಲ್ ನಲ್ಲಿ ಇದ್ದುಕೊಂಡು ಕಾಲೇಜಿಗೆ ಹೋಗಿ ಬರುತ್ತಿದ್ದ. ಮೂರನೇ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಅಮೃತೇಶ್, ಎರಡು ವಿಷಯದಲ್ಲಿ ಫೇಲ್ ಆಗಿದ್ದ. ಇತ್ತೀಚೆಗೆ ಸರಿಯಾಗಿ ಕಾಲೇಜಿಗೂ ಹೋಗುತ್ತಿರಲಿಲ್ಲ ಎನ್ನಲಾಗಿದೆ.
ಜಿಗಣಿ ಕೆರೆಯಲ್ಲಿ ಅಮೃತೇಶ್ ಮೃತದೇಹವು ತೇಲಿಕೊಂಡು ಬಂದಿದ್ದು, ಇದನ್ನು ಕಂಡ ಸ್ಥಳೀಯರು ಕೂಡಲೇ ಜಿಗಣಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ ಪೊಲೀಸರು ಸದ್ಯ ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296