ಬೆಂಗಳೂರು: ಬೆಂಗಳೂರು ಹೊರವಲಯದ ಚಂದಾಪುರದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳ ಮೃತದೇಹ ವಸತಿ ನಿಲಯದ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ. ಚಂದಾಪುರ ಸಮೀಪದ ಹೀಲಲಿಗೆ ಬಳಿಯಿರುವ ಬಿಸಿಇಟಿ ಎಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದಲ್ಲಿ ವಿದ್ಯಾರ್ಥಿನಿ ಹರ್ಷಿತಾ(18) ಮೃತದೇಹವಾಗಿ ಪತ್ತೆಯಾಗಿದ್ದಾಳೆ.
ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಕರಡಿಹಳ್ಳಿ ಗ್ರಾಮದ ವಿದ್ಯಾರ್ಥಿನಿ ಹರ್ಷಿತ ಹೀಲಲಿಗೆಯಲ್ಲಿನ ಕಾಲೇಜ್ ಅಫ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿಯಲ್ಲಿ ಎಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದಳು.
ವರದಿಗಳ ಪ್ರಕಾರ ಇಂದು ಪಕ್ಕದ ಕೋಣೆಯ ಪ್ರಗತಿ ಎಂಬ ವಿದ್ಯಾರ್ಥಿನಿ ಹರ್ಷಿತಾ ಇದ್ದ ಕೋಣೆಯನ್ನು ಸಾಕಷ್ಟು ಬಾರಿ ಬಡಿದಿದ್ದಳು. ಆ ಕಡೆಯಿಂದ ಉತ್ತರ ಬರದಿದ್ದಾಗ ಅನುಮಾನಗೊಂಡು ಸ್ಟೂಲ್ ಹತ್ತಿ ಕಿಟಕಿಯಿಂದ ಇಣುಕಿ ನೋಡಿದ್ದಾಳೆ. ಈ ವೇಳೆ ಹರ್ಷಿತಾ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದಾಳೆ.
ಕಾಲೇಜು ಸಿಬ್ಬಂದಿ ಕಿರುಕುಳಕ್ಕೆ ಬೇಸತ್ತು ಹರ್ಷಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆಡಳಿತ ಮಂಡಳಿ ಸಾಕಷ್ಟು ದಿನಗಳಿಂದ ಹರ್ಷಿತಾಳಿಗೆ ಕಿರುಕುಳ ನೀಡುತ್ತಿತ್ತು. ಇದರಿಂದ ಬೇಸತ್ತು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹರ್ಷಿತಾ ಸಹಪಾಠಿಗಳು ಆರೋಪಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


