ತುಮಕೂರು: ಸಿದ್ದಗಂಗಾ ಮಠದಲ್ಲಿ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಇಂದು ಸಿದ್ದಲಿಂಗೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ನಡೆಯುತ್ತಿದೆ.
ಸಾವಿರಾರು ಭಕ್ತರ ಸಮ್ಮುಖದಲ್ಲಿ ಬ್ರಹ್ಮರಥೋತ್ಸವಕ್ಕೆ ಚಾಲನೆ ನೀಡಲಾಗಿದೆ. ಬ್ರಹ್ಮರಥೋತ್ಸವಕ್ಕೆ ವಿಶೇಷ ಪೂಜೆ ಸಲ್ಲಿಸಿ ಚಾಲನೆ ನೀಡಲಾಯಿತು. ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಸಿದ್ದಲಿಂಗ ಶ್ರೀಗಳು ಬ್ರಹ್ಮರಥೋತ್ಸವಕ್ಕೆ ಚಾಲನೆ ನೀಡಿದರು.
ವಿವಿಧ ಹೂಗಳಿಂದ ಅಲಂಕಾರಗೊಂಡ ರಥೋತ್ಸವ ನಡೆಯುತ್ತಿದೆ. ಸಿದ್ದಗಂಗಾ ಮಠದ ಕಿರಿಯ ಶ್ರೀಗಳಾದ ಶಿವಸಿದ್ದೇಶ್ವರ ಸ್ವಾಮೀಜಿ ಹಾಗೂ ತುಮಕೂರು ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿಲ್ಲಾ ಪಂ ಸಿಇಓ ಪ್ರಭು, ಎಸ್ ಪಿ ಅಶೋಕ್, ಮಹಾನಗರ ಪಾಲಿಕೆ ಕಮಿಷನರ್ ಬಿ.ವಿ ಅಶ್ವಿಜಾ, ಶಾಸಕ ಜಿ.ಬಿ ಜ್ಯೋತಿ ಗಣೇಶ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.
ತುಮಕೂರಿನ ಕ್ಯಾತಸಂದ್ರ ಬಳಿಯಿರುವ ಸಿದ್ದಗಂಗಾ ಮಠದಲ್ಲಿ ನಡೆಯುತ್ತಿರುವ ಈ ಜಾತ್ರಾ ಮಹೋತ್ಸವಕ್ಕೆ ಜನಸಾಗರವೇ ಹರಿದುಬರುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4