ನಕಲಿ ಶಿವಸೇನೆಯವರು ನನ್ನನ್ನು ಮಣ್ಣಿನಲ್ಲಿ ಹೂತು ಹಾಕುವ ಕನಸುಕಾಣುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ಕಾಂಗ್ರೆಸ್ ಒಂದೆಡೆ ಪ್ರಧಾನಿ ಮೋದಿ ನಿಮ್ಮನ್ನು ಸಮಾಧಿ ಮಾಡುತ್ತಾರೆ ಎಂದು ಹೇಳಿಕೆ ನೀಡುತ್ತಾರೆ ಇನ್ನೊಂದೆಡೆ ನಕಲಿ ಶಿವಸೇನೆಯವರು ನನ್ನನ್ನು ಜೀವಂತ ಸಮಾಧಿ ಮಾಡುವ ಬಗ್ಗೆ ಮಾತನಾಡುತ್ತಿದೆ. ಮೋದಿಯನ್ನು ಮಣ್ಣಿನಲ್ಲಿ ಹೂತು ಹಾಕುವ ಕನಸುಕಾಣುತ್ತಿದ್ದಾರೆ ಎಂದರು.
ನಕಲಿ ಶಿವಸೇನೆಯ ರಾಜಕೀಯ ಭವಿಷ್ಯ ನೆಲಕಚ್ಚಿದೆ. ದೇಶದ ತಾಯಂದಿರು ಮತ್ತು ಸಹೋದರಿಯರು ಮೋದಿಯನ್ನು ರಕ್ಷಿಸುತ್ತಾರೆ ಎಂದು ಅವರಿಗೆ ತಿಳಿದಿಲ್ಲ. ಶಿವಸೇನೆಯ ನಕಲಿ ಸದಸ್ಯರು ಬಾಂಬ್ ಸ್ಫೋಟದ ಅಪರಾಧಿಗಳನ್ನು ಪ್ರಚಾರಕ್ಕೆ ಕರೆದುಕೊಂಡು ಹೋಗುತ್ತಿದ್ದಾರೆ. ಮೇವು ಹಗರಣದಲ್ಲಿ ಶಿಕ್ಷೆಗೊಳಗಾದ ವ್ಯಕ್ತಿಯನ್ನು ಹೆಗಲ ಮೇಲೆ ಹೊತ್ತುಕೊಂಡು ಬಿಹಾರದಲ್ಲಿ ತಿರುಗಾಡುತ್ತಿದ್ದಾರೆ ಎಂದರು. ಈ ಜನರು ಬಾಳಾಸಾಹೇಬ್ ಠಾಕ್ರೆ ಅವರನ್ನು ನೋಯಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಪ್ರಧಾನಿ ಹೇಳಿದರು.
ನಾನು ಕಾಂಗ್ರೆಸ್ ನಂತಹ ರಾಜಮನೆತನದಂತಹ ದೊಡ್ಡ ಕುಟುಂಬದಿಂದ ಬಂದವನಲ್ಲ, ನಾನು ಬಡತನದಲ್ಲಿ ಬೆಳೆದೆ. ನೀವು ಎಷ್ಟು ಕಷ್ಟ ಅನುಭವಿಸಿದ್ದೀರಿ ಎಂಬುದು ನನಗೆ ತಿಳಿದಿದೆ. ಅನೇಕ ಬುಡಕಟ್ಟು ಕುಟುಂಬಗಳಿಗೆ ಶಾಶ್ವತ ಮನೆಗಳಿರಲಿಲ್ಲ, ದೇಶಕ್ಕೆ ಸ್ವಾತಂತ್ರ್ಯ ಬಂದು 60 ವರ್ಷ ಕಳೆದರೂ ಹಳ್ಳಿಗಳಿಗೆ ವಿದ್ಯುತ್ ಬಂದಿರಲಿಲ್ಲ. ಪ್ರತಿ ಬಡವರು, ಬುಡಕಟ್ಟು ಜನಾಂಗದವರಿಗೂ ಮನೆ ನೀಡಲಾಗುವುದು, ಪ್ರತಿ ಬುಡಕಟ್ಟು ಜನಾಂಗದವರ ಮನೆಗೆ ನೀರು, ಪ್ರತಿ ಹಳ್ಳಿಗೆ ವಿದ್ಯುತ್ ಸೌಲಭ್ಯ ಕಲ್ಪಿಸಲಾಗುವುದು ಎಂದು ಮೋದಿ ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296