ಬೀದರ್: ರೈತರೊಬ್ಬರು ಬಾವಿಗೆ ಹಾರಿ ಸಾವಿಗೆ ಶರಣಾಗಿರುವ ಘಟನೆ ಬೀದರ ಜಿಲ್ಲಾ ಔರಾದ ತಾಲೂಕಿನ ಮುಸ್ತಾಪೂರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಹುಲೆಪ್ಪ ಎಂಬವರ ಪುತ್ರ ಉಮಾಕಾಂತ(46) ಸಾವಿಗೆ ಶರಣಾದವರಾಗಿದ್ದಾರೆ. ಶನಿವಾರ ಬೆಳಗ್ಗೆ 8 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ.
ಮೃತ ವ್ಯಕ್ತಿ ಇಬ್ಬರು ಹೆಣ್ಣು ಹಾಗೂ ಓರ್ವ ಗಂಡು ಮಗನನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ಸಂತಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣಗಳೇನು ಎನ್ನುವುದು ಇನ್ನೂ ತಿಳಿದು ಬಂದಿಲ್ಲ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296