ದಾವಣಗೆರೆ: ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಪಾರ್ಥಿವ ಶರೀರದ ಅಂತಿಮ ಯಾತ್ರೆ ನಗರದ ಎಂಸಿಸಿ ಬಡಾವಣೆಯ ಅವರ ನಿವಾಸದಿಂದ ಸೋಮವಾರ ಮಧ್ಯಾಹ್ನ 12.32ಕ್ಕೆ ಆರಂಭವಾಯಿತು.
ಪೂಜಾ ಕೈಂಕರ್ಯ ಮುಗಿದು ಪಾರ್ಥಿವ ಶರೀರವನ್ನು ಮನೆಯಿಂದ ಹೊರಗೆ ತರಲಾಯಿತು. ಎಂಸಿಸಿ ಬಡಾವಣೆಯ ‘ಬಿ’ ಬ್ಲಾಕ್‌ನಿಂದ ಹೊರಟ ಮೆರವಣಿಗೆಯಲ್ಲಿ ಭಜನೆ ತಂಡಗಳು ಭಕ್ತಿಗೀತೆ ಹಾಡಿದವು. ಪಾರ್ಥಿವ ಶರೀರದ ಕೈವಲ್ಯಕ್ಕೆ ಪುತ್ರ, ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹೆಗಲು ಕೊಟ್ಟಿದ್ದರು.
ರಸ್ತೆಯ ಇಕ್ಕೆಲಗಳಲ್ಲಿ ಸಾಲಾಗಿ ನಿಂತಿರುವ ಜನರು ಹೂಹಾರ ಹಾಕಿ ಗೌರವ ಸಲ್ಲಿಸಿದರು. ಶಾಮನೂರು ರಸ್ತೆ, ಗುಂಡಿ ವೃತ್ತ, ಚರ್ಚ್ ರಸ್ತೆ, ರಾಮ್ ಅಂಡ್ ಕೋ ವೃತ್ತ, ಎವಿಕೆ ಕಾಲೇಜು ರಸ್ತೆಯ ಮೂಲಕ ಸಾಗಿದ ಮೆರವಣಿಗೆ ಹೈಸ್ಕೂಲ್ ಮೈದಾನ ತಲುಪಿತು.
ಗೃಹ ಸಚಿವ ಜಿ.ಪರಮೇಶ್ವರ, ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜ ಸಚಿವರಾದ ಎಸ್.ಎ.ರವೀಂದ್ರನಾಥ, ಎಂ.ಪಿ.ರೇಣುಕಾಚಾರ್ಯ, ಶಾಸಕ ಕೆ.ಎಸ್. ಬಸವಂತಪ್ಪ, ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅಂತಿಮ ದರ್ಶನ ಪಡೆದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


