ಹಾಸನ: ಜಿಲ್ಲೆಯ ಆಲೂರು ತಾಲೂಕಿನ ತಿಮ್ಮನಹಳ್ಳಿ ಗ್ರಾಮದ ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ವರು ಬಾಲಕರು ನೀರುಪಾಲಾಗಿದ್ದಾರೆ. ಮತ್ತೋರ್ವ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಜೀವನ್ (13), ಸಾತ್ವಿಕ್ (11), ವಿಶ್ವ (12), ಪೃಥ್ವಿ (12) ಮೃತ ದುರ್ದೈವಿಗಳಾಗಿದ್ದಾರೆ.
ಮೃತ ಮಕ್ಕಳು ಮುತ್ತಿಗೆ ಗ್ರಾಮದವರು ಎಂದು ತಿಳಿದು ಬಂದಿದೆ. ಶಾಲೆಗೆ ರಜೆ ಇರುವುದರಿಂದ ಐವರು ಗೆಳೆಯರು ಈಜಲು ಹೊಳೆಗೆ ಹೋಗಿದ್ದರು. ಹೊಳೆಗೆ ಇಳಿದಾಗ ನೀರಿನಿಂದ ಹೊರಬರಲು ಆಗದೆ ನಾಲ್ವರು ನೀರುಪಾಲಾಗಿದ್ದಾರೆ. ಮತ್ತೊರ್ವ ಬದುಕುಳಿದಿದ್ದಾನೆ.
ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ನೀರಲ್ಲಿ ಕೊಚ್ಚಿ ಹೋಗಿರುವ ಮೃತದೇಹಕ್ಕಾಗಿ ಅಗ್ನಿಶಾಮಕದಳದ ಸಿಬ್ಬಂದಿಯಿಂದ ಶೋಧಕಾರ್ಯ ಮುಂದುವರಿದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


