ದೊಡ್ಡಬಳ್ಳಾಪುರ ತಾಲ್ಲೂಕು ಘಾಟಿ ಸುಬ್ರಮಣ್ಯಸ್ವಾಮಿ ಕ್ಷೇತ್ರದಲ್ಲಿ ಇದೇ 25ರಿಂದ 10 ದಿನಗಳವರೆಗೆ ಅಂತರರಾಜ್ಯ ಮಟ್ಟದ ದನಗಳ ಜಾತ್ರೆ ನಡೆಯಲಿದೆ ಎಂದು ನವ ಕರ್ನಾಟಕ ಯುವ ಶಕ್ತಿ ವೇದಿಕೆ ತಿಳಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆ ಅಧ್ಯಕ್ಷ ಅಂಬರೀಶ್, ‘ದನಗಳ ಜಾತ್ರೆಯಲ್ಲಿ ವಿವಿಧ ತಳಿಗಳ ಜಾನುವಾರು ಪ್ರದರ್ಶನ ಹಾಗೂ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಜಾತ್ರೆಗೆ ಉಚಿತ ಪ್ರವೇಶವಿದ್ದು, 3 ಲಕ್ಷಕ್ಕೂ ಹೆಚ್ಚು ಜಾನುವಾರುಗಳು ಭಾಗವಹಿಸುವ ನಿರೀಕ್ಷೆ ಇದೆ’ ಎಂದು ಮಾಹಿತಿ ನೀಡಿದರು.


