ಬೆಂಗಳೂರು: ಮುಜರಾಯಿ ಇಲಾಖೆ ದೇವಸ್ಥಾನಗಳ ಹಣ ತಡೆ ಹಿಡಿದಿರುವ ಆದೇಶವನ್ನು ಹಿಂಪಡೆಯುವಂತೆ ಆಯುಕ್ತರಿಗೆ ಸಚಿವ ರಾಮಲಿಂಗರೆಡ್ಡಿ ಸೂಚನೆ ನೀಡಿದ್ದಾರೆ. ಗೊಂದಲದಿಂದ ಆಯುಕ್ತರು ಹಣ ತಡೆ ಹಿಡಿದು ಆದೇಶ ಹೊರಡಿಸಿದ್ದಾರೆ.
ಕೇವಲ ದೇವಸ್ಥಾನ ಗಳ ಜೀರ್ಣೋದ್ಧಾರ, ಕಾಮಗಾರಿಗಳ ವಿವರ ಪಡೆಯುವಂತೆ ಸಚಿವರು ಸೂಚಿಸಿದ್ದರು. ಸೂಚನೆ ನೀಡಿದ ಹಿನ್ನೆಲೆಯಲ್ಲಿ ಮುಜರಾಯಿ ಇಲಾಖೆ ಆಯುಕ್ತರು ಆದೇಶ ವಾಪಸ್ ಪಡೆದಿದ್ದಾರೆ.


