ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸೋಮವಾರ ಮಹತ್ವದ 3 ವಿಧೇಯಕಗಳಿಗೆ ಅಂಕಿತ ಹಾಕಿರುವುದಾಗಿ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಮಾಹಿತಿ ನೀಡಿದರು. ರಾಜ್ಯ ಸರ್ಕಾರದ 11 ಮಸೂದೆಗಳ ಪೈಕಿ ಕರ್ನಾಟಕ ಸಾರ್ವಜನಿಕ ಪರೀಕ್ಷೆ (ನೇಮಕಾತಿಯಲ್ಲಿ ಭ್ರಷ್ಟಾಚಾರ ಮತ್ತು ಅನ್ಯಾಯ ತಡೆಗಟ್ಟುವ ಕ್ರಮಗಳು) ಮಸೂದೆ 2023, ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ಮಸೂದೆ-2024 ಹಾಗೂ ಕರ್ನಾಟಕ ಪುರಸಭೆಗಳು (ಮುನ್ಸಿಪಾಲಿಟಿ) & ಇತರ ಕೆಲವು ಕಾನೂನು (ತಿದ್ದುಪಡಿ) ಮಸೂದೆ-2024ಕ್ಕೆ ಅಂಕಿತ ಹಾಕಿದ್ದಾರೆ.
ಕಳೆದೆರಡು ವಾರಗಳ ಹಿಂದೆ ರಾಜ್ಯಪಾಲರು ಮತ್ತು ರಾಜ್ಯ ಕಾಂಗ್ರೆಸ್ ಸರ್ಕಾರದ ನಡುವೆ ಕಾನೂನು ಸಂಘರ್ಷ ಹೆಚ್ಚಾಗಿತ್ತು. ಒಂದೆಡೆ ಮುಡಾ ಕದನದ ನಡುವೆಯೇ ಉಭಯ ಸದನಗಳಲ್ಲಿ ಅನುಮೋದನೆಗೊಂಡಿದ್ದ 11 ವಿಧೇಯಕಗಳನ್ನು ವಾಪಸ್ ಮಾಡಿದ್ದ ರಾಜ್ಯಪಾಲರ ನಡೆಗೆ ಸರ್ಕಾರ ತೀವ್ರವಾಗಿ ಖಂಡಿಸಿತ್ತು.
ಕರ್ನಾಟಕ ಸಾರ್ವಜನಿಕ ಪರೀಕ್ಷೆಗಳು ವಿಧೇಯಕ-2023, ಕರ್ನಾಟಕ ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ಸಂಸ್ಥೆಗಳು ವಿಧೇಯಕ-2024, ಕರ್ನಾಟಕ ನಗರ ಯೋಜನೆ (ತಿದ್ದುಪಡಿ) ವಿಧೇಯಕ-2024, ಗದಗ -ಬೆಟಗೇರಿ ವ್ಯಾಪಾರ, ಸಾಂಸ್ಕೃತಿಕ ಮತ್ತು ಪ್ರದರ್ಶನ ಪ್ರಾಧಿಕಾರ ವಿಧೇಯಕ-2023, ನೋಂದಣಿ (ಕರ್ನಾಟಕ ತಿದ್ದುಪಡಿ) ವಿಧೇಯಕ-2024, ಕರ್ನಾಟಕ ಪೌರಸಂಸ್ಥೆಗಳು ಮತ್ತು ಇತರ ಕೆಲವು ಕಾನೂನು (ತಿದ್ದುಪಡಿ) ವಿಧೇಯಕ-2024, ಕರ್ನಾಟಕ ಚಿತ್ರ ಮತ್ತು ಸಾಂಸ್ಕೃತಿಕ ಕಲಾವಿದರ (ಕಲ್ಯಾಣ) ವಿಧೇಯಕ -2024, ಕರ್ನಾಟಕ ಸಹಕಾರ ಸೊಸೈಟಿಗಳು (ತಿದ್ದುಪಡಿ) ವಿಧೇಯಕ-2024, ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ವಿಧೇಯಕ-2024, ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ-2024, ಕರ್ನಾಟಕ ವಿಧಾನಮಂಡಲ (ಅನರ್ಹ ತಡೆ) ತಿದ್ದುಪಡಿ ವಿಧೇಯಕ-2024.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


