ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದಲ್ಲಿ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದ್ದು, ದಾಖಲೆ ಇಲ್ಲದೇ ಸಂಗ್ರಹಿಸಿದ್ದ 3.55 ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
ವಶಪಡಿಸಿಕೊಂಡ ಚಿನ್ನಾಭರಣವು ದಾವಣಗೆರೆಯ ವರ್ಧಮಾನ ಜುವೆಲ್ಲೆರಿಗೆ ಸೇರಿದ್ದು ಎಂದು ತಿಳಿದುಬಂದಿದೆ. ದಾಖಲೆ ಇಲ್ಲದ ಚಿನ್ನ ಸಂಗ್ರಹಿಸಿದ್ದ ಹಿನ್ನೆಲೆಯಲ್ಲಿ ತಹಸೀಲ್ದಾರ್ ರಾಜೇಶ್ ಹಾಗೂ ಸಿಪಿಐ ರಾಘವೇಂದ್ರ ನೇತೃತ್ವದಲ್ಲಿ ದಾಳಿ ನಡೆಸಿ ಚಿನ್ನವನ್ನು ಜಪ್ತಿ ಮಾಡಲಾಗಿದ್ದು, ಈ ಸಂಬಂಧ ಹಿರಿಯೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296