ಲೋಕಸಭಾ ಚುನಾವಣೆಯೂ ಸೇರಿದಂತೆ ರಾಜ್ಯದಲ್ಲಿ ಮುಂಬರುವ ಎಲ್ಲ ಚುನಾವಣೆಗಳಲ್ಲಿ ಅಭೂತಪೂರ್ವ ಗೆಲುವು ಸಾಧಿಸಲು ಶ್ರಮಿಸುವ ಅಗತ್ಯವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಹೇಳಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಬಿಜೆಪಿ ರಾಜ್ಯ ಪ್ರಮುಖರ ವಿಶೇಷ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡಿದರು. ಲೋಕಸಭೆ ಸೇರಿದಂತೆ ಎಲ್ಲ ಚುನಾವಣೆಗಳಲ್ಲಿ ಅಭೂತಪೂರ್ವ ಗೆಲುವು ಸಾಧಿಸಲು ಹಿರಿಯರ ಮಾರ್ಗದರ್ಶನ ಅತ್ಯಗತ್ಯ ಎಂದರು.
ಲೋಕಸಭಾ ಚುನಾವಣೆವೆರಗೂ ಶಾಸಕ ಬಸನಗೌಡ ಯತ್ನಾಳ್ ಬಗ್ಗೆ ಸೈಲೆಂಟ್ ಆಗಿರಲು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಯತ್ನಾಳ್ ವಿರುದ್ಧ ಕ್ರಮಕ್ಕೆ ಮುಂದಾದರೆ ಪಂಚಮಸಾಲಿಗರ ವಿರೋಧ ಕಟ್ಟಿಕೊಳ್ಳಬಹುದು ಅನ್ನೋ ಆತಂಕ ವಿಜಯೇಂದ್ರ ಅವರನ್ನ ಕಾಡುತ್ತಿದೆ. 40 ಲಕ್ಷ ಪಂಚಮಸಾಲಿ ಮತಗಳು ಚದುರುವ ಭಯದ ಜೊತೆ ಸಿ.ಸಿ. ಪಾಟೀಲ್, ಬೆಲ್ಲದ್ ಸೇರಿ ಕೆಲವರ ವಿರೋಧ ಕಟ್ಟಿಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಯತ್ನಾಳ್ ವಿರುದ್ಧ ಕ್ರಮಕ್ಕೆ ವರಿಷ್ಠರು ಹಿಂದೇಟು ಹಾಕ್ತಿದ್ದಾರೆ.


