ರಾಯಗಢ: ಶಿವಸೇನೆ ಉಪನಾಯಕಿ ಸುಷಾ ಅಂಧಾರೆಯನ್ನು ಕರೆದುಕೊಂಡು ಬರಲು ಹೊರಟಿದ್ದ ಖಾಸಗಿ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಹಠಾತ್ ಅಪಘಾತಕ್ಕೀಡಾಗಿ, ಪತನಗೊಂಡಿರುವ ಘಟನೆ ಮಹಾರಾಷ್ಟ್ರದ ರಾಯಗಢದಲ್ಲಿ ನಡೆದಿದೆ. ಪರಿಣಾಮ ಇಬ್ಬರು ಪೈಲಟ್ ಗಳು ಗಾಯಗೊಂಡಿದ್ದಾರೆ.
ಹೆಲಿಕಾಪ್ಟರ್ ನ ಪೈಲಟ್ ಅದೃಷ್ಟವಶಾತ್ ಹೆಲಿಕಾಪ್ಟರ್ ನಿಂದ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ತನಿಖೆಗಾಗಿ ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಮೈದಾನವು ಸಮತಟ್ಟಾಗಿರದ ಕಾರಣ ಘಟನೆ ಸಂಭವಿಸಿದೆ ಎನ್ನಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296