2019ರ ಏಪ್ರಿಲ್ 1ನೇ ತಾರೀಖಿಗೆ ಮೊದಲು ನೋಂದಾಯಿಸಲಾದ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್ ಗಳ(ಎಚ್‌ಎಸ್‌ಆರ್ ಪಿ) ಅಳವಡಿಸಲು ಕೊನೆಯ ದಿನಾಂಕವನ್ನು ಜುಲೈ 4ರವರೆಗೆ ವಿಸ್ತರಣೆ ಮಾಡಲಾಗಿದೆ. ವಾಹನ ಸವಾರರಿಗೆ ಎಚ್‌ಎಸ್‌ಆರ್ ಪಿ ಅಳವಡಿಸಿಕೊಳ್ಳಲು ಮತ್ತಷ್ಟು ದಿನ ಅವಕಾಶ ಸಿಕ್ಕಂತಾಗಿದೆ.
ಹೆಚ್‌ಎಸ್‌ಆರ್ ಪಿ ಅಳವಡಿಸದ ವಾಹನ ಮಾಲೀಕರ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಳ್ಳದಂತೆ ಈ ಮೊದಲು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಜುಲೈ 4ರ ತನಕ ವಿಸ್ತರಣೆ ಮಾಡಿದೆ.
ಅರ್ಜಿ ಸಲ್ಲಿಸುವ ವಿಧಾನ:
https://transport.karnataka.gov.in ಅಥವಾ www.siam.in ಜಾಲತಾಣಕ್ಕೆ ಭೇಟಿ ನೀಡಿ ಎಚ್‌ಎಸ್‌ಆರ್ ಪಿ ಪಡೆಯಲು ಅರ್ಜಿ ಸಲ್ಲಿಸಬಹುದು. ಮೊದಲು Book HSRP ಕ್ಲಿಕ್ ಮಾಡಿ.
ನಿಮ್ಮ ವಾಹನ ತಯಾರಕರನ್ನು ಆಯ್ಕೆಮಾಡಿ.
ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ.
ನಂಬರ್ ಪ್ಲೇಟ್ ಬದಲಾಯಿಸಲು ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆಮಾಡಿ.
ಶುಲ್ಕವನ್ನು ಆನ್ ಲೈನ್ ನಲ್ಲಿ ಪಾವತಿಸಿ. (ನಗದು ರೂಪದಲ್ಲಿ ಪಾವತಿ ಮಾಡಲು ಅವಕಾಶ ಇಲ್ಲ).
ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒಟಿಪಿ ಬರುತ್ತದೆ.
ಎಚ್ ಎಸ್‌ಆರ್ ಪಿ ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆಮಾಡಿ.
ನಿಮ್ಮ ವಾಹನದ ಯಾವುದೇ ತಯಾರಕ/ಡೀಲರ್ ಸಂಸ್ಥೆಗೆ ಭೇಟಿ ನೀಡಿ ಎಚ್ ಎಸ್ ಆರ್ ಪಿ ಪಡೆಯಬಹುದು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296