ಮೃತ ಸ್ವಾತಂತ್ರ್ಯ ಹೋರಾಟಗಾರನ ವೃದ್ಧ ಪತ್ನಿಗೆ ಪಿಂಚಣಿ ಮತ್ತು ಹಿಂಬಾಕಿ ಪಾವತಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದ್ದ ಏಕ ಸದಸ್ಯ ಪೀಠ ಹೊರಡಿಸಿದ್ದ ತೀರ್ಪನ್ನು ಹೈಕೋರ್ಟ್ ವಿಭಾಗೀಯ ಪೀಠ ರದ್ದುಪಡಿಸಿ ಆದೇಶಿಸಿದೆ.
ಪಿಂಚಣಿ ಮತ್ತು ಹಿಂಬಾಕಿ ಪಾವತಿಸಲು ಸೂಚನೆ ನೀಡಿದ್ದ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್. ದೇವದಾಸ್ ಮತ್ತು ಕೆ. ರಾಜೇಶ್ ರೈ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.
ಅಲ್ಲದೇ, ಕೇಂದ್ರ ಸರ್ಕಾರಿ ಸನ್ಮಾನ್ ಪಿಂಚಣಿ ಯೋಜನೆಯ ವಿತರಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು 2014ರಲ್ಲಿ ಮಾರ್ಗಸೂಚಿ ಪ್ರಕಟಿಸಿದೆ. ಅದನ್ನು ರಾಜ್ಯ ಸರ್ಕಾರ ಸಹ ಪಾಲಿಸುತ್ತಿದೆ. ಆ ಮಾರ್ಗಸೂಚಿ ಪ್ರಕಾರ, ಸ್ವಾತಂತ್ರ್ಯ ಹೋರಾಟಗಾರ ಅಥವಾ ಹೋರಾಟಗಾರ್ತಿ ಸಾವನ್ನಪ್ಪಿದ ನಂತರ ಅವರ ಹೆಸರಿನಲ್ಲಿ ಪಿಂಚಣಿ ವಿತರಿಸುವಂತಿಲ್ಲ.
ಜತೆಗೆ, ಹೋರಾಟಗಾರ ಮತ್ತು ಹೋರಾಟಗಾರ್ತಿ ವಿಷಯವು ಪರಿಶೀಲನೆಯಲ್ಲಿದ್ದರೂ ಸಹ ಪಿಂಚಣಿ ಪಾವತಿಸುವಂತಿಲ್ಲ. ಅದರಂತೆ ರಾಜ್ಯ ಸರ್ಕಾರವು ಪ್ರಕರಣದಲ್ಲಿ ಮೃತ ಸ್ವಾತಂತ್ರ್ಯ ಹೋರಾಟಗಾರನ ವೃದ್ಧ ಪತ್ನಿಯಾದ ಬೆಳಗಾವಿಯ ನಿವಾಸಿ ಸಾವಂತ್ರವ್ವ (89) ಅವರಿಗೆ ಪಿಂಚಣಿ ನಿರಾಕರಿಸಿ, ರಾಜ್ಯ ಸರ್ಕಾರ ಹೊರಡಿಸಿದ ಆದೇಶ ಸೂಕ್ತವಾಗಿದೆ ಎಂದು ವಿಭಾಗೀಯ ಪೀಠ ಆದೇಶದಲ್ಲಿ ತಿಳಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


