ನವದೆಹಲಿ: ಅರುಣಾಚಲ ಪ್ರದೇಶದಲ್ಲಿ ಇಂದು ಭೂಕುಸಿತ ಸಂಭವಿಸಿದ್ದು, ಚೀನಾದ ಗಡಿಗೆ ಸಂಪರ್ಕ ಕಲ್ಪಿಸುವ ಹೆದ್ದಾರಿಯ ಒಂದು ಭಾಗ ಕೊಚ್ಚಿ ಹೋಗಿದೆ. ಘಟನೆಯ ಬಗ್ಗೆ ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಕಳವಳ ವ್ಯಕ್ತಪಡಿಸಿದ್ದಾರೆ.
ಜಿಲ್ಲಾಡಳಿತವು ದಿಭಾಂಗ್ ಕಣಿವೆಯ ನಿವಾಸಿಗಳಿಗೆ ಮೂರು ದಿನಗಳಲ್ಲಿ ಪ್ರಯಾಣಿಕರಿಗೆ ಅನುಕೂಲ ಮಾಡುತ್ತೇವೆ ಎಂದು ನೋಟಿಸ್ ನೀಡಿದೆ. ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ರೋಯಿಂಗ್‌ಗೆ ಸಂಪರ್ಕಿಸುವ NH 313 ರ ಪ್ರಮುಖ ಭಾಗವು ಕೊಚ್ಚಿಹೋಗಿದೆ ಎಂದು ದಿಭಾಂಗ್ ಕಣಿವೆಯ ಎಲ್ಲಾ ನಿವಾಸಿಗಳಿಗೆ ತಿಳಿಸಲಾಗಿದೆ. ಇದನ್ನು ಸರಿಪಡಿಸಲು ಕನಿಷ್ಟ ಮೂರು ದಿನಗಳು ಬೇಕಾಗಬಹುದು ಎಂದು ಅಂದಾಜಿಸಲಾಗಿದೆ. ಆದ್ದರಿಂದ ರಸ್ತೆಯನ್ನು ಪುನಃಸ್ಥಾಪಿಸುವವರೆಗೆ ಮತ್ತು ಮಳೆ ಸಹಜ ಸ್ಥಿತಿಗೆ ಮರಳುವವರೆಗೆ ಸಹಕರಿಸಬೇಕಾಗಿ ನೋಟಿಸ್ ನಲ್ಲಿ ತಿಳಿಸಲಾಗಿದೆ.
ದಿಭಾಂಗ್ ಕಣಿವೆಯು ಭಾರತದ ಇತರ ಭಾಗಗಳೊಂದಿಗೆ ಸಂಪರ್ಕಿಸುವ ಏಕೈಕ ಮಾರ್ಗವಾಗಿದೆ. ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಸತತ ಮಳೆಯಿಂದಾಗಿ ಈ ಘಟನೆ ನಡೆದಿದೆ. ಹುನ್ಲಿ ಮತ್ತು ಅನಿನಿ ನಡುವಿನ ಹೆದ್ದಾರಿ ಕುಸಿತದಿಂದಾಗಿ ಪ್ರಯಾಣಿಕರಿಗೆ ತೊಂದರೆಯಾಗಿದೆ. ಈ ರಸ್ತೆಯು ದೇಶದ ಇತರ ಭಾಗಗಳಿಗೆ ಸಂಪರ್ಕಿಸುವ ಕಾರಣ ಶೀಘ್ರದಲ್ಲಿ ಮರುಸ್ಥಾಪಿಸಲು ಸೂಚನೆಗಳನ್ನು ನೀಡಲಾಗಿದೆ ಎಂದು ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296