ಬೆಂಗಳೂರು: ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರ ಮೇಲೆ ಹನಿಟ್ರ್ಯಾಪ್ ಪ್ರಯತ್ನ ನಡೆದಿದೆ ಎಂಬ ವಿಚಾರ ಇದೀಗ ಕಾಂಗ್ರೆಸ್ ಹೈಕಮಾಂಡ್ ಅಂಗಳಕ್ಕೆ ತಲುಪಿದೆ.
ನಿನ್ನೆಯಷ್ಟೇ ರಾಜಣ್ಣ ಅವರ ಪುತ್ರ ಹಾಗೂ ಎಂಎಲ್‌ಸಿ ರಾಜೇಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿ ನೀಡಿ ಈ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿದ್ದಾರೆ. ಹನಿಟ್ರ್ಯಾಪ್ ಪ್ರಕರಣದ ಹಿಂದೆ ಪ್ರಭಾವಿ ಸಚಿವರೊಬ್ಬರ ಕೈವಾಡವಿದೆ ಎಂದೂ ಅವರು ಆರೋಪಿಸಿದ್ದಾರೆ.
ಇನ್ನು ಪ್ರಕರಣ ಸಂಬಂಧ ರಾಜಣ್ಣ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಶೀಘ್ರದಲ್ಲೇ ನವದೆಹಲಿಗೆ ತೆರಳಲಿದ್ದು, ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿ ಮಾಡಲಿದ್ದಾರೆಂದು ತಿಳಿದುಬಂದಿದೆ.
ರಾಜಕೀಯವಾಗಿ ತಮ್ಮನ್ನು ಹಿಮ್ಮೆಟ್ಟಿಸಲು ಪಕ್ಶದ ನಾಯಕರು ಹನಿಟ್ರ್ಯಾಪ್ ಮಾಡಲು ಪಿತೂರಿ ನಡೆಸಿದ್ದಾರೆಂದು ಇಬ್ಬರೂ ದೂರು ನೀಡಲಿದ್ದಾರೆಂದು ತಿಳಿದುಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4