ಕೊಪ್ಪಳ: ಕೊಪ್ಪಳ ತಾಲೂಕಿನ ಬುಡಶೆಟ್ನಾಳ ಗ್ರಾಮದಲ್ಲಿ ಪತ್ನಿಯನ್ನು ಹೊಡೆದು ಕೊಲೆ ಮಾಡಿದ ಪತಿ ಕೊಲೆಯ ನಂತರ ತಾನು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪತ್ನಿ ಲಕ್ಷ್ಮವ್ವ(40) ಪತಿಯಿಂದ ಕೊಲೆಯಾದ ಪತ್ನಿಯಾಗಿದ್ದಾರೆ. ಬುಡಶೆಟ್ನಾಳದ ನಿಂಗಪ್ಪ(45) ಪತ್ನಿಯನ್ನು ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಆರೋಪಿ ಪತಿಯಾಗಿದ್ದಾನೆ.
ಹೊಲದಲ್ಲೇ ಘಟನೆ ನಡೆದಿದ್ದು, ಹೊಲದಲ್ಲೇ ಹೆಂಡತಿಯನ್ನು ಕೊಂದು ಹಾಕಿದ ಈತ, ಅಲ್ಲೇ ಇದ್ದ ಮರವೊಂದಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ವಿಪರೀತ ಕುಡಿತದ ಚಟವನ್ನು ಹೊಂದಿದ್ದ ನಿಂಗಪ್ಪ, ಯಾವಾಗಲೂ ಮದ್ಯ ಸೇವಿಸಿ ಬಂದು ಪತ್ನಿಯ ಜೊತೆಗೆ ವಿನಾಕಾರಣ ಜಗಳ ತೆಗೆಯುತ್ತಿದ್ದ ಎಂದು ನೆರೆಕರೆಯವರು ತಿಳಿಸಿದ್ದಾರೆ. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296