ಬಾಣಸವಾಡಿಯ ಎಚ್‌ಆರ್‌ಬಿಆರ್ ಲೇಔಟ್ ನಲ್ಲಿ ಪತ್ನಿಯನ್ನು ಪತಿ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಕೆಂಚಮ್ಮ(20) ಕೊಲೆಯಾದವರು. ಕೃತ್ಯ ಎಸಗಿದ ಈಕೆಯ ಪತಿ ಸಿದ್ದಪ್ಪ(25) ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಸಿದ್ದಪ್ಪ ಆರು ತಿಂಗಳ ಹಿಂದೆ ಕೆಂಚಮ್ಮ ಅವರನ್ನು ಮದುವೆಯಾಗಿದ್ದರು. ಎಚ್‌ಆರ್‌ಬಿಆರ್ ಲೇಔಟ್ ನ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಸಿದ್ದಪ್ಪ ಗ್ಯಾಸ್ ಸಿಲಿಂಡರ್ ಡೆಲಿವರಿ ಕೆಲಸ ಮಾಡುತ್ತಿದ್ದರೆ ಕೆಂಚಮ್ಮ ಅವರು ಕೂಲಿ ಕೆಲಸ ಮಾಡಿಕೊಂಡಿದ್ದರು.
‘ಮಂಗಳವಾರ ರಾತ್ರಿ ಮದ್ಯ ಸೇವಿಸಿ ಮನೆಗೆ ಬಂದಿದ್ದ ಸಿದ್ದಪ್ಪ ಜತೆ ಕೆಂಚಮ್ಮ ಜಗಳವಾಡಿದ್ದರು. ಆಗ ಕೋಪಗೊಂಡ ಕೆಂಚಮ್ಮ ಪತಿಗೆ ಥಳಿಸಿದ್ದರು. ಆಕ್ರೋಶಗೊಂಡ ಆರೋಪಿ, ಆಕೆಯ ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾನೆ. ಬಳಿಕ ಸಂಬಂಧಿಕರಿಗೆ ಕರೆ ಮಾಡಿ ಕೆಂಚಮ್ಮ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ತಿಳಿಸಿದ್ದ’ ಎಂದು ಪೊಲೀಸರು ಹೇಳಿದರು.
ಅನುಮಾನಗೊಂಡ ಸಂಬಂಧಿಕರು ಪೊಲೀಸರಿಗೆ ದೂರು ನೀಡಿದ್ದರು. ದೂರು ಆಧರಿಸಿ ತನಿಖೆ ನಡೆಸಿದಾಗ ಕೊಲೆ ಮಾಡಿರುವುದಾಗಿ ಆರೋಪಿ ತಪ್ಲೊಪ್ಪಿಕೊಂಡಿದ್ದಾನೆ ಎಂದು ಪೊಲೀಸ್ ಹೇಳಿದರು. ಬಾಣಸವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


