ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರ ತುಮಕೂರು ಕಛೇರಿಯಲ್ಲಿ ಭಾನುವಾರ ಸಂವಿಧಾನ ಶಿಲ್ಪಿ, ಭಾರತ ರತ್ನ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ 133ನೇ ಜಯಂತಿ ಸರಳವಾಗಿ ಆಚರಿಸಲಾಯಿತು.

ಪ್ರಾದೇಶಿಕ ನಿರ್ದೇಶಕರಾದ ಡಾ. ಲೋಕೇಶ ಆರ್ ರವರು ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿದರು. ಕಾರ್ಯಕ್ರಮದಲ್ಲಿ ಪ್ರಾದೇಶಿಕ ಕೇಂದ್ರ ಸಿಬ್ಬಂದಿಗಳಾದ ಲಕ್ಷ್ಮಿಕಾಂತ್ ಜಿ.ಹೆಚ್. ಉಪನ್ಯಾಸಕರಾದ ಸುರೇಶ್ ಉಪಸ್ಥಿತರಿದ್ದರು.
ವರದಿ: ನಂದೀಶ್ ನಾಯ್ಕ ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


