ಮಿರ್ಜಾಪುರ: ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಕೂಟವು ‘ಕೋಮುವಾದ’ ಮತ್ತು ‘ಜಾತಿವಾದ’ದಿಂದ ಕೂಡಿದ್ದು, ಮೈತ್ರಿಕೂಟದ ನಾಯಕರು ಮುಸ್ಲಿಮರಿಗೆ ಮೀಸಲಾತಿ ಒದಗಿಸಲು ಸಂವಿಧಾನವನ್ನು ತಿದ್ದುಪಡಿ ಮಾಡಲು ನಿರ್ಧರಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಾಗ್ದಾಳಿ ನಡೆಸಿದ್ದಾರೆ.
ಮಿರ್ಜಾಪುರ ಲೋಕಸಭಾ ಕ್ಷೇತ್ರದ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ಅನುಪ್ರಿಯಾ ಪರ ಚುನಾವಣಾ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದ್ದಾರೆ.
‘ಸಮಾಜವಾದಿ ಪಕ್ಷ ಹಾಗೂ ಕಾಂಗ್ರೆಸ್ ವೋಟ್ ಬ್ಯಾಂಕ್ ಗೆ ಮೀಸಲಾಗಿದ್ದರೆ, ನಾವು ಹಿಂದುಳಿದ ವರ್ಗಗಳು ಮತ್ತು ಬಡವರ ಹಕ್ಕುಗಳಿಗೆ ಸಮರ್ಪಿತರಾಗಿದ್ದೇವೆ’ ಎಂದು ಮೋದಿ ತಿಳಿಸಿದ್ದಾರೆ.
ಇಂಡಿಯಾ ಮೈತ್ರಿಕೂಟದ ನಾಯಕರು ಕೋಮುವಾದಿ, ಜಾತಿವಾದಿ ಹಾಗೂ ಪರಿವಾರವಾದಿಗಳಾಗಿದ್ದಾರೆ. ಅವರು ಅಧಿಕಾರದಲ್ಲಿದ್ದಾಗಲೆಲ್ಲ ಕುಟುಂಬ ರಾಜಕಾರಣದ ಆಧಾರದ ಮೇಲೆ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ ಎಂಬುದು ದೇಶದ ಜನರಿಗೆ ತಿಳಿದಿದೆ ಎಂದು ಅವರು ಹೇಳಿದ್ದಾರೆ.
ಸಮಾಜವಾದಿ ಪಕ್ಷವು ಯಾದವ ಸಮುದಾಯವನ್ನು ನಿರ್ಲಕ್ಷಿಸುವ ಮೂಲಕ ದಿವಂಗತ ಮುಲಾಯಂ ಸಿಂಗ್ ಯಾದವ್ ಅವರ ಕುಟುಂಬದ ಸದಸ್ಯರಿಗೆ ಮಾತ್ರ ಟಿಕೆಟ್ ನೀಡಿದೆ ಎಂದು ಆರೋಪಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296