ವೀಡಿಯೋಗಳನ್ನು ಯಾರು ವೈರಲ್ ಮಾಡಿದ್ದಾರೆ ಎನ್ನುವುದಕ್ಕಿಂತ, ಸಾರ್ವಜನಿಕ ಜೀವನದಲ್ಲಿ ಹೇಗೆ ವರ್ತಿಸುತ್ತೇವೆ ಎಂಬುದು ಮುಖ್ಯ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದು, ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣ ಹಾಗೂ ರೇವಣ್ಣ ಬಂಧನದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಈ ವೇಳೆ ಪ್ರಕರಣದ ತನಿಖೆಯನ್ನು ಎಸ್ಐಟಿ ನಡೆಸುತ್ತಿದೆ. ಗಂಭೀರ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿರುವುದರಿಂದ ರೇವಣ್ಣ ಬಂಧನವಾಗಿದೆ. ಈ ರೀತಿ ಆಗಬಾರದಿತ್ತು ಎಂದಿದ್ದಾರೆ.
ಹಲವಾರು ಮಹಿಳೆಯರು ದೂರು ಕೊಟ್ಟಿದ್ದಾರೆ. ಪ್ರಜ್ವಲ್ ರೇವಣ್ಣ ಸಹ ಅರೆಸ್ಟ್ ಆಗಲೇಬೇಕು. ಪ್ರಕರಣದ ತನಿಖೆ ಸೂಕ್ತ ರೀತಿಯಲ್ಲಿ ಆಗಬೇಕು. ಈ ವಿಚಾರದಲ್ಲಿ ನಮ್ಮ ಪಕ್ಷದ ನಿಲವು ಸ್ಪಷ್ಟವಾಗಿದೆ ಎಂದಿದ್ದಾರೆ. ರೇವಣ್ಣರಿಗೆ ಸಾಕಷ್ಟು ವಯಸ್ಸಾಗಿದೆ ಇದು ದುರ್ದೈವ. ಸಾರ್ವಜನಿಕ ಜೀವನದಲ್ಲಿ ಹೇಗೆ ವರ್ತನೆ ಮಾಡುತ್ತೇವೆ ಎಂಬುದು ಬಹಳ ಮುಖ್ಯ. ವೀಡಿಯೋ ರಿಲೀಸ್ ಆಗಿರುವುದು ಬೇಸರದ ವಿಚಾರ. ಈ ರೀತಿಯ ಘಟನೆ ಆಗಬಾರದಿತ್ತು. ವೀಡಿಯೋ ನನ್ನದಲ್ಲಾ ಎಂದರೆ ನಾವು ಎಫ್ಎಸ್ಎಲ್ ಗೆ ಕಳುಹಿಸುತ್ತವೆ. ವೀಡಿಯೋ ಯಾರು ರಿಲೀಸ್ ಮಾಡಿದರು ಅನ್ನೋದು ಚರ್ಚೆ ವಿಷಯ ಅಲ್ಲ. ಮಹಿಳೆಯರ ಜೊತೆಗೆ ನಡೆದುಕೊಂಡಿರುವ ರೀತಿ ಸರಿಯಾದುದಲ್ಲ ಎಂದು ಅವರು ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296