ನೆಲಮಂಗಲ: ನೆಲಮಂಗಲ ತಾಲೂಕಿನ ವಾಜರಹಳ್ಳಿಯಲ್ಲಿ ಬಿರುಗಾಳಿ ರಭಸಕ್ಕೆ ಕಬ್ಬಿಣದ ಗೇಟ್ ಮುರಿದು ಬಿದ್ದು ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಯಲ್ಲಮ್ಮ (7) ಮೃತ ಬಾಲಕಿಯಾಗಿದ್ದಾರೆ.
ನಿನ್ನೆ ಸಂಜೆ ಮನೆಯ ಅಂಗಳದಲ್ಲಿದ್ದ ಗೇಟ್ ಮೇಲೆ ಹತ್ತಿ ಬಾಲಕಿ ಯಲ್ಲಮ್ಮ ಆಟವಾಡುತ್ತಿದ್ದಳು. ಈ ವೇಳೆ ದಿಢೀರನೆ ಗೇಟ್ ಮುರಿದಿದ್ದು, ಬಾಲಕಿ ಮೇಲೆ ಬಿದ್ದಿದೆ. ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಈ ಸಂಬಂಧ ನೆಲಮಂಗಲ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296