ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ.
• ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳುವ ಮೀನುಗಾರರನ್ನು ತುರ್ತು ಸಂದರ್ಭಗಳಲ್ಲಿ ರಕ್ಷಣೆಗೆ ಮಾಡುವುದಕ್ಕಾಗಿ ಅತ್ಯಾಧುನಿಕ ಸಮುದ್ರ ಆಂಬುಲೆನ್ಸ್ ಖರೀದಿಸಲಾಗುವುದು ಎಂದು ಅವರು ಘೋಷಣೆ ಮಾಡಿದ್ದಾರೆ. ಮೀನುಗಾರಿಕೆ ಕ್ಷೇತ್ರಕ್ಕೆ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ 3 ಸಾವಿರ ಕೋಟಿ ಯೋಜನೆ ಘೋಷಿಸಿದ್ದಾರೆ. ಹೊನ್ನಾವರ ಅಥವಾ ಕಾಸರಗೋಡದಲ್ಲಿ ಮೀನುಗಾರಿಕೆ ಸಂಶೋಧನಾ ಕೇಂದ್ರ ಸ್ಥಾಪನೆ ಮಾಡಲಾಗುವುದು. ಭದ್ರಾವತಿಯಲ್ಲಿ ಹೈಟೆಕ್ ಮೀನು ಮಾರುಕಟ್ಟೆ ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ಘೋಷಣೆ ಮಾಡಿದರು.
• ಬೆಂಗಳೂರು ಉಪ ರೈಲು ಯೋಜನೆ ಚುರುಕುಗೊಳಿಸಲು ಬಜೆಟ್ ನಲ್ಲಿ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ ಅವರು ಬೈಯ್ಯಪ್ಪನಹಳ್ಳಿಯಿಂದ ಚಿಕ್ಕಬಾಣಾವರದವರೆಗಿನ ಕಾರಿಡಾರ್-2 ವೇಗವಾಗಿ ಅನುಷ್ಠಾನ ಮಾಡಲಾಗುವುದು ಎಂದು ಘೋಷಣೆ ಮಾಡಿದರು. ಬಿಎಂಟಿಸಿಗೆ ಹೊಸದಾಗಿ 1334 ಹೊಸ ಇವಿ ಬಸ್ ಖರೀದಿಗೆ ನಿರ್ಧಾರ, ಜೊತೆಗೆ ಬಿಎಂಟಿಸಿಗೆ 820 ಬಿಎಸ್6 ಡೀಸೆಲ್ ಬಸ್ ಸೇರ್ಪಡೆ, ಮಹಿಳೆಯರ ಸುರಕ್ಷತೆಗಾಗಿ ಬಿಎಂಟಿಸಿ ಬಸ್ ಗಳಲ್ಲಿ ಆ್ಯಪ್ ಅನುಷ್ಠಾನ, ವೆಹಿಕಲ್ ಟ್ರ್ಯಾಕಿಂಗ್ ಹೊಂದಿರುವ ಆ್ಯಪ್ ಅನುಷ್ಠಾನ ಮಾಡುವ ಬಗ್ಗೆ ಘೋಷಣೆ ಮಾಡಲಾಗಿದೆ.
•ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಣೆ ಮಾಡಿದರು.
•ಬೆಂಗಳೂರು ಬಿಸಿನೆಸ್ ಕಾರಿಡರ್ ರೂಪಿಸಲು ಬಜೆಟ್ ನಲ್ಲಿ ನಿರ್ಧಾರ ಮಾಡಲಾಗಿದ್ದು,
73 ಕಿ.ಮೀ ಉದ್ದದ ರಸ್ತೆಯನ್ನು 27 ಸಾವಿರ ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು. ನಗರಾಭಿವೃದ್ಧಿ ಅಂಗಸಂಸ್ಥೆ ಬಿಬಿಎಂಪಿ, ಬಿಎಂಆರ್ಸಿಎಲ್, ಬಿಡಬ್ಲ್ಯುಎಸ್ಎಸ್ಬಿ, ಬಿಡಿಎನಲ್ಲಿ ಸೋಲಾರ್ ಪಾರ್ಕ್ ನಿರ್ಮಾಣ ಮಾಡಲಾಗುವುದು. 2025ರೊಳಗೆ 44 ಕಿ.ಮೀ ಮೆಟ್ರೋ ಮಾರ್ಗ ಸೇರ್ಪಡೆ ಮಾಡಲಾಗುವುದು ಎಂದು ಸಿದ್ದರಾಮಯ್ಯ ಘೋಷಣೆ ಮಾಡಿದರು.
•ತೋಟಗಾರಿಕೆ ಬೆಳೆಗಳಿಗೆ ವಿಜಯಪುರ ಜಿಲ್ಲೆಯು ಹೆಸರುವಾಸಿಯಾಗಿದ್ದು, ಈ ಭಾಗದಲ್ಲಿ ತೋಟಗಾರಿಕೆ ಬೆಳೆಗಳಿಗೆ ಇನ್ನಷ್ಟು ಉತ್ತೇಜನ ನೀಡಲು ವಿಜಯಪುರ ಜಿಲ್ಲೆಯ ಆಲಮೇಲದಲ್ಲಿ ತೋಟಗಾರಿಕೆ ಕಾಲೇಜನ್ನು ಸ್ಥಾಪಿಸಲಾಗುವುದು ಎಂದು ಸಿಎಂ ಘೋಷಣೆ ಮಾಡಿದರು.
ಶಿವಮೊಗ್ಗದ ಸೋಗಾನೆ, ವಿಜಯಪುರದ ಇಟ್ಟಂಗಿಹಾಳ, ಬೆಂಗಳೂರು ಗ್ರಾ. ಜಿಲ್ಲೆ ಮೂಗೆನಹಳ್ಳಿ ಬಳಿ ಆಹಾರ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.
•ಮದ್ಯದ ದರ ಮತ್ತೆ ಹೆಚ್ಚಳ:
2023-24ನೇ ಸಾಲಿನ ಜನವರಿ ತಿಂಗಳ ಅಂತ್ಯದವರೆಗೆ, ಅಬಕಾರಿ ತೆರಿಗೆಯಿಂದ 28,181 ಕೋಟಿ ರೂ.ಗಳು ಸ್ವೀಕೃತವಾಗಿರುತ್ತದೆ. 2024-25ನೇ ಸಾಲಿಗೆ 38,525 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ ಎಂದು ಅವರು ತಿಳಿಸಿದರು.
ಘೋಷಣೆಗಳು:
- ರಾಜ್ಯದಲ್ಲಿನ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು 20 ಕೋಟಿ ರೂ. ಅನುದಾನ ಒದಗಿಸಲಾಗುವುದು.
- ರೇಷ್ಮೆ ನೂಲು ಬಿಚ್ಚಾಣಿಕೆಯಲ್ಲಿ ತೊಡಗಿರುವ ಅಲ್ಪಸಂಖ್ಯಾತ ಫಲಾನುಭವಿಗಳ ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಲು ರೇಷ್ಮೆ ಇಲಾಖೆ ಮೂಲಕ ತರಬೇತಿ ಮತ್ತು ಕೆಎಂಡಿಸಿ ಮೂಲಕ ಸಾಲ ಸೌಲಭ್ಯಗಳನ್ನು ನೀಡಲಾಗುವುದು.
- ವಕ್ಫ್ ಸಂಸ್ಥೆಯ ಧಾರ್ಮಿಕ ಗುರುಗಳಿಗೆ ಹಾಗೂ ಮುತವಲ್ಲಿಗಳಿಗೆ ಪ್ರಚಲಿತ ವಿದ್ಯಮಾನಗಳ ಬಗ್ಗೆ ಅರಿವು ಮೂಡಿಸಲು ತರಬೇತಿ ಕಾರ್ಯಗಾರಗಳನ್ನು ಏರ್ಪಡಿಸಲಾಗುವುದು.


