ಬಿಟ್ ಕಾಯಿನ್ ಅಕ್ರಮ ಪ್ರಕರಣದ ಪ್ರಮುಖ ಸಾಕ್ಷ್ಯ ಎನ್ನಲಾದ ಲ್ಯಾಪ್‌ಟಾಪ್ ನಾಪತ್ತೆಯಾಗಿದ್ದು, ಅದಕ್ಕಾಗಿ ವಿಶೇಷ ತನಿಖಾ ತಂಡದ (ಎಸ್‌ಐಟಿ) ಅಧಿಕಾರಿಗಳು ಹುಡುಕಾಟ ಶುರು ಮಾಡಿದ್ದಾರೆ.
ಅಂತರರಾಷ್ಟ್ರೀಯ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯನ್ನು ಬಂಧಿಸಿದ್ದ ಸಿಸಿಬಿ ಅಧಿಕಾರಿಗಳು, ಆತನಿಗೆ ಬೇರೆ ವ್ಯಕ್ತಿಯೊಬ್ಬರ ಲ್ಯಾಪ್‌ಟಾಪ್ ಕೊಟ್ಟಿದ್ದರು.
ಅದೇ ಲ್ಯಾಪ್ ಟಾಪ್ ಬಳಸಿಕೊಂಡು ಶ್ರೀಕಿ, ಬಿಟ್ ಕಾಯಿನ್ ವರ್ಗಾವಣೆ ಮಾಡಿದ್ದನೆಂಬ ಮಾಹಿತಿ ಲಭ್ಯವಾಗಿದೆ ಎಂದು ಮೂಲಗಳು ಹೇಳಿವೆ.


