ಬೆಂಗಳೂರು: ನೀರಿನ ಟ್ಯಾಂಕರ್ ವಾಹನ ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ವಾಹನ ಸವಾರನೊಬ್ಬ ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ನಡೆದಿದ್ದು ತಡವಾಡಿ ಬೆಳಕಿಗೆ ಬಂದಿದೆ. ಹರೀಶ್ ಅಪಘಾತದಲ್ಲಿ ಸಾವನ್ನಪ್ಪಿದ್ದು, ಮತ್ತೊಬ್ಬ ವಾಹನ ಸವಾರ ಸುಚಿತ್ಗೆ ಗಂಭೀರ ಗಾಯಗಳಾಗಿದೆ.
ಬೈಕ್ ಸವಾರರು ಭಾನುವಾರ ರಾತ್ರಿ ಮಾಗಡಿ ರಸ್ತೆಯ ಕಾವೇರಿ ಫ್ಯಾಷನ್ಸ್ ಬಳಿ ಹೋಗುವಾಗ ಎದುರಿಗೆ ಬಂದ ವಾಟರ್ ಟ್ಯಾಂಕರ್ ವಾಹನ ಡಿಕ್ಕಿಯಾಗಿದ್ದು, ಡಿಕ್ಕಿಯ ರಭಸಕ್ಕೆ ಹಿಂಬದಿಯ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತೊಬ್ಬ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದೆ. ಅಪಘಾತದ ಸಂಪೂರ್ಣ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕುಡಿದ ಅಮಲಿನಲ್ಲಿ ಬೈಕ್ ಸವಾರ, ವಾಹನ ಚಾಲನೆ ಮಾಡಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದ್ದು, ಘಟನೆ ಸಂಬಂಧ ಕಾಮಾಕ್ಷಿಪಾಳ್ಯ ಸಂಚಾರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296