ತುಮಕೂರು: ಇತ್ತೀಚೆಗೆ ಬಾಲಕಿಯ ಮೇಲೆ ದಾಳಿ ನಡೆಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ತುಮಕೂರು ತಾಲೂಕಿನ ಚಿಕ್ಕಬೆಳ್ಳಾವಿಯಲ್ಲಿ ಕಳೆದ ಎರಡು ದಿನಗಳ ಹಿಂದೆ ದಾಳಿ ನಡೆಸಿದ್ದ ಚಿರತೆಯು ಸ್ಥಳದಿಂದ ಪರಾರಿಯಾಗಿತ್ತು.
ಚಿರತೆಯನ್ನು ಬಂಧಿಸುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಮನವಿ ಸಲ್ಲಿಸಿದ್ದರು. ಗ್ರಾಮಸ್ಥರ ಮನವಿ ಮೇರೆಗೆ ಗ್ರಾಮದ ಹೊರವಲಯದ ಕೋಳಿ ಫಾರ್ಮ್ ಬಳಿ ಅರಣ್ಯ ಇಲಾಖೆ ಸಿಬ್ಬಂದಿ ಬೋನು ಇರಿಸಿದ್ದರು.
ಇಂದು ಬೆಳಗಿನ ಜಾವ ಸುಮಾರು ಮೂರು- ನಾಲ್ಕು ವರ್ಷದ ಗಂಡು ಚಿರತೆಯಾಗಿದೆ. ಬೆಳ್ಳಾವಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ನಿರಂತರ ದಾಳಿ ನಡೆಸುತ್ತಾ ಸಾರ್ವಜನಿಕರನ್ನು ಕಂಗೆಡಿಸಿದ್ದ ಚಿರತೆಯನ್ನು ಆರ್ ಎಫ್ಓ ಪವಿತ್ರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಸೆರೆ ಹಿಡಿಯಲಾಗಿದೆ.


