ಶಿವಮೊಗ್ಗ: ಈಗಾಗಲೇ ಬಿಜೆಪಿಯು 195 ಕ್ಷೇತ್ರದ ಲೋಕಸಭಾ ಟಿಕೆಟ್ ಪಟ್ಟಿ ಪ್ರಕಟಿಸಿದ್ದು, ದೆಹಲಿಯಲ್ಲಿ ನಾಡಿದ್ದು ನಡೆಯಲಿರುವ ಸಭೆಯಲ್ಲಿ ಕರ್ನಾಟಕದ ಪಟ್ಟಿ ಫೈನಲ್ ಆಗಲಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಭೆಯಲ್ಲಿ ಭಾಗವಹಿಸಲು ಹೋಗುತ್ತಿದ್ದೇನೆ. ಎರಡನೇ ಪಟ್ಟಿಯಲ್ಲಿ ಕರ್ನಾಟಕದ ಪಟ್ಟಿ ಅಂತಿಮವಾಗಲಿದೆ. 28 ಕ್ಷೇತ್ರಗಳ ಪಟ್ಟಿ ಬಹುತೇಕ ಫೈನಲ್ ಆಗಬಹುದು. ಎಲ್ಲಾ ಕ್ಷೇತ್ರದ ಪಟ್ಟಿ ಫೈನಲ್ ಆಗುತ್ತದೆ ಎಂದು ಹೇಳಿದರು.
ಹೊಸಬರಿಗೆ ಆದ್ಯತೆ ವಿಚಾರವಾಗಿ ದೆಹಲಿ ನಾಯಕರ ಮನಸ್ಸಿನಲ್ಲಿ ಏನಿದೆಯೋ ಗೊತ್ತಿಲ್ಲ. ಅವರ ತೀರ್ಮಾನವೇ ಅಂತಿಮ. ಬಿಜೆಪಿ – ಜೆಡಿಎಸ್ ಹೊಂದಾಣಿಕೆ ನಿಶ್ಚಿತ. ಆದರೆ ಸ್ಥಾನದ ಬಗ್ಗೆ ಅಂತಿಮವಾಗಿಲ್ಲ. ಮಂಡ್ಯದಿಂದ ಸುಮಲತಾ ಸ್ಪರ್ಧೆ ಬಗ್ಗೆ ಯಾವುದೇ ಸ್ಪಷ್ಟವಾದ ಮಾಹಿತಿಯಿಲ್ಲ ಎಂದೂ ಸ್ಪಷ್ಟನೆ ನೀಡಿದರು.
ಗೋ ಬ್ಯಾಕ್ ಶೋಭ ಕರಂದ್ಲಾಜೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಬಿಎಸ್ವೈ, ಇದಕ್ಕೆ ಯಾವುದೇ ಅರ್ಥ ಇಲ್ಲ. ಅವರ ಒಳ್ಳೆಯ ಕೆಲಸ ಮಾಡುವುದನ್ನು ಸಹಿಸದೆ ಕೆಲವರು ಈ ರೀತಿ ಮಾಡಿದ್ದಾರೆ. ಇದಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


