ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದು, ಲಾರಿ ಪಲ್ಟಿಯಾಗಿ, ಲಾರಿ ಚಾಲಕನಿಗೆ ಗಂಭೀರ ಗಾಯವಾಗಿರೋ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಬಳಿ ನಡೆದಿದೆ.
ಲಾರಿ ಸಂಪೂರ್ಣ ಜಖಂ ಗೊಂಡಿದೆ. ವಾಟರ್ ಬಾಟಲ್ ತುಂಬಿಕೊಂಡು ಮೈಸೂರು ಕಡೆಗೆ ತೆರಳುವಾಗ ಘಟನೆ ನಡೆದಿದೆ. ಗಾಯಗೊಂಡಿದ್ದ ಚಾಲಕನಿಗೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಸ್ಥಳಕ್ಕೆ ಹುಲಿಯೂರುದುರ್ಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296