ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಹೊರವಲಯದ ಪಾಲನಜೋಗಹಳ್ಳಿ ಕೆರೆಯಲ್ಲಿ ವ್ಯಕ್ತಿಯೊಬ್ಬ ಮೀನು ಹಿಡಿಯಲು ಹೋಗಿ ನೀರು ಪಾಲಾಗಿರುವ ಘಟನೆ ನಡೆದಿದೆ. ಪ್ರಕಾಶ್ ಮೃತ ದುರ್ದೈವಿಯಾಗಿದ್ದಾರೆ.
ಪ್ರಕಾಶ್ ಮೀನು ಹಿಡಿಯಲು ಸ್ನೇಹಿತನ ಜೊತೆ ಕೆರೆಯ ಬಳಿ ಹೋಗಿದ್ದಾನೆ. ಮೀನು ಹಿಡಿಯಲು ಕೆರೆಯ ಅರ್ಧಭಾಗಕ್ಕೆ ಹೋಗಿದ್ದು, ಈ ವೇಳೆ ಈಜು ಬಾರದೆ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.
ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು, ಮೃತದೇಹವನ್ನು ಕೆರೆಯಿಂದ ಹೊರತೆಗೆದಿದ್ದಾರೆ. ಈ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


